ಅನ್ನಭಾಗ್ಯ ಯೋಜನೆಯ ಬಗ್ಗೆ ಕಾಮೆಂಟ್ ಮಾಡುವ ನೈತಿಕತೆ ವಿಜಯೇಂದ್ರಗಿಲ್ಲ: ಸಿದ್ದರಾಮಯ್ಯ
ಬಿಪಿಎಲ್ ಕಾರ್ಡುಗಳ ಬಗ್ಗೆ ಮಾತಾಡಿದ ಸಿದ್ದರಾಮಯ್ಯ ಆದಾಯ ತೆರಿಹಗೆ ಪಾವತಿಸುವವರಿಗೆ, ಸರ್ಕಾರೀ ನೌಕರರಿಗೆ ಅನ್ನಭಾಗ್ಯ ಸ್ಕೀಮಿನ ಅಕ್ಕಿ ನೀಡಬೇಕೇ? ಎಂದು ಪ್ರಶ್ನಿಸಿ ಅಂಥವರ ಹೆಸರಲ್ಲಿದ್ದ ಕಾರ್ಡುಗಳನ್ನು ರದ್ದು ಮಾಡುವ ಉದ್ದೇಶದಿಂದ ಶುದ್ಧೀಕರಣ ಕಾರ್ಯ ಕೈಗೆತ್ತಿಕೊಂಡಿದ್ದು ಎಂದರು.
ಮೈಸೂರು: ಬಿಪಿಎಲ್ ಕಾರ್ಡುಗಳ ಪರಿಷ್ಕರಣೆ ಮಾಡುತ್ತಿರುವ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವಿ ವಿಜಯೇಂದ್ರ ನೀಡುವ ಹೇಳಿಕೆಗಳನ್ನು ಯಾಕೆ ದೃಶ್ಯ ಮಾಧ್ಯಮಗಳಲ್ಲಿ ತೋರಿಸುತ್ತೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಧ್ಯಮಗಳ ಮೇಲೆ ರೇಗಾಡಿದರು. ವಿಜಯೇಂದ್ರರನ್ನು ಪಕ್ಷದ ರಾಜ್ಯಾಧ್ಯಕ್ಷ ಮಾಡುವ ಮೂಲಕ ಬಿಎಸ್ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಮಾಡಹೊರಟಿದ್ದಾರೆ, ಇದೇ ಯಡಿಯೂರಪ್ಪ ತಾವು ಸಿಎಂ ಆಗಿದ್ದಾಗ ಕಾಂಗ್ರೆಸ್ ಸರ್ಕಾರ ಬಡವರಿಗೆ ನೀಡುತ್ತಿದ್ದ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದ್ದರು. ಪರಿಸ್ಥಿತಿ ಹೀಗಿರುವಾಗ ವಿಜಯೇಂದ್ರ ಯಾವ ನೈತಿಕತೆಯಿಂದ ಬಡವರ ಅಕ್ಕಿ ಬಗ್ಗೆ ಮಾತಾಡುತ್ತಾರೆ ಎಂದು ಸಿದ್ದರಾಮಯ್ಯ ಕೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದೇಶದಲ್ಲೇ ಎರಡನೇ ಅತಿದೊಡ್ಡ ಹಾಲು ಉತ್ಪಾದಕ ರಾಜ್ಯ ಕರ್ನಾಟಕ: ಸಿಎಂ ಸಿದ್ದರಾಮಯ್ಯ
Latest Videos