ವಿಜಯೇಂದ್ರ ಒಬ್ಬ ಮಾಸ್ ಲೀಡರ್, ಪಕ್ಷ ಮುನ್ನಡೆಸುವ ಸಾಮರ್ಥ್ಯ ಅವರಲ್ಲಿದೆ: ಎಂಪಿ ರೇಣುಕಾಚಾರ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Dec 03, 2024 | 1:43 PM

ಬಿಎಸ್ ಯಡಿಯೂರಪ್ಪನವರು ಪಕ್ಷದ ರಾಜ್ಯಾಧ್ಯಕ್ಷನಾದಾಗ ಅವರಿಗೆ ಕೇವಲ 45ರ ಪ್ರಾಯ, ಆಗ ಬಿಬಿ ಶಿವಪ್ಪ, ಡಾ ಎಂಅರ್ ತಂಗಾ, ರಾಮಚಂದ್ರಪ್ಪ, ಮಲ್ಲಿಕಾರ್ಜುನಯ್ಯ ಮೊದಲಾದ ಹಿರಿಯ ನಾಯಕರು ಯಡಿಯೂರಪ್ಪ ಪಕ್ಷ ಮುನ್ನಡೆಸಲು ಒಪ್ಪಿಗೆ ಸೂಚಿಸಿ ಅವರೊಂದಿಗೆ ಕೆಲಸ ಮಾಡಿದ್ದರು, ಸೈಕಲ್ ಮತ್ತು ಸ್ಕೂಟರ್ ಮೇಲೆ ಓಡಾಡುತ್ತಾ ಅವರು ಪಕ್ಷ ಕಟ್ಟಿದರು ಎಂದು ರೇಣುಕಾಚಾರ್ಯ ಹೇಳಿದರು.

ನೆಲಮಂಗಲ: ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರು ಬಸನಗೌಡ ಪಾಟೀಲ್ ಯತ್ನಾಳ್ ನೇತೃತ್ವದ ರೆಬೆಲ್ ಬಿಜೆಪಿ ನಾಯಕರ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರಿಸಿದ್ದಾರೆ, ಅದರೆ ಮೊದಲಿನ ಹಾಗೆ ಬೈದಾಡುವುದನ್ನು ಕಡಿಮೆ ಮಾಡಿದ್ದಾರೆ. ವಿಜಯೇಂದ್ರ ಇನ್ನೂ ಚಿಕ್ಕ ಹುಡುಗ ಎಂದು ಯತ್ನಾಳ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿದ ರೇಣುಕಾಚಾರ್ಯ, ವಿಜಯೇಂದ್ರ ಒಬ್ಬ ಮಾಸ್ ಲೀಡರ್, ಪಕ್ಷದ ನಾಯಕತ್ವ ವಹಿಸಿಕೊಂಡು ಮುನ್ನಡೆಸಲು ವಯಸ್ಸಲ್ಲ, ಸಾಮರ್ಥ್ಯ ಮುಖ್ಯ, ಅವರಲ್ಲಿ ಸಾಮರ್ಥ್ಯ ಇರೋದನ್ನು ಮನಗಂಡೇ ವರಿಷ್ಠರು ಜವಾಬ್ದಾರಿ ನೀಡಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಯತ್ನಾಳ್ ಹಿಂದೂ ಹುಲಿಯಲ್ಲ, ಮುಖವಾಡ ಧರಿಸಿಕೊಂಡು ತಿರುಗಾಡುವ ಗೋಮುಖವ್ಯಾಘ್ರ: ರೇಣುಕಾಚಾರ್ಯ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.