AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ

ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ ಅವಧಿ ಪೂರ್ವ ಚುನಾವಣೆ ಖಚಿತ ಎಂದ ವಿಜಯೇಂದ್ರ

Basavaraj Yaraganavi
| Edited By: |

Updated on: May 27, 2026 | 12:11 PM

Share

ಸಿದ್ದರಾಮಯ್ಯ ರಾಜೀನಾಮೆ ನೀಡಿದರೂ ಹೊಸ ಮುಖ್ಯಮಂತ್ರಿ ತಾತ್ಕಾಲಿಕ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಕಾಂಗ್ರೆಸ್‌ನ ಆಂತರಿಕ ಕಚ್ಚಾಟ ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆಗೆ ಕಾರಣವಾಗಲಿದೆ. ಹೈಕಮಾಂಡ್ ನಿರ್ಧಾರದಿಂದ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕಾದ ಅನಿವಾರ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಶಿವಮೊಗ್ಗ, ಮೇ 27: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ರಾಜ್ಯ ರಾಜಕೀಯದ ಕುರಿತು ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ಶಿವಮೊಗ್ಗದಲ್ಲಿ ಮಹತ್ವದ ಹೇಳಿಕೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಅಧಿಕಾರಕ್ಕೆ ಬಂದರೂ ಅದು ಕೇವಲ ತಾತ್ಕಾಲಿಕವಾಗಿದ್ದು, ಅವಧಿ ಪೂರ್ವ ಚುನಾವಣೆ ನಿಶ್ಚಿತ ಎಂದು ವಿಜಯೇಂದ್ರ ಭವಿಷ್ಯ ನುಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಆಂತರಿಕ ಕಚ್ಚಾಟ ಮತ್ತು ಅಸಮಾಧಾನದಿಂದ ರಾಜ್ಯದ ಆಡಳಿತ ಕುಸಿದಿದ್ದು, ಇದು ಬಿಜೆಪಿಗೆ ಅನುಕೂಲಕರ ವಾತಾವರಣ ಸೃಷ್ಟಿಸಿದೆ. ಸಿದ್ದರಾಮಯ್ಯನವರು ಇಷ್ಟು ಸುಲಭವಾಗಿ ರಾಜೀನಾಮೆ ನೀಡುತ್ತಾರೆ ಎಂದು ಭಾವಿಸಿರಲಿಲ್ಲ ಎಂದವರು ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
Basavaraj Yaraganavi
Basavaraj Yaraganavi