ಬೆಳ್ಳಾರೆಗೆ ಹೋಗುತ್ತಿರುವುದು ಪ್ರವೀಣ್ ಕುಟುಂಬದ ಸದಸ್ಯರನ್ನು ಸಂತೈಸಲು ಎಂದರು ವಿಜಯೇಂದ್ರ
ಪಕ್ಷದಿಂದ ಪ್ರವೀಣ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.
ಮಂಗಳೂರು: ಬಿಜೆಪಿ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆಯ ಬಳಿಕ ಪ್ರಕ್ಷುಬ್ದಗೊಂಡಿರುವ ಬೆಳ್ಳಾರೆ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿಯಲ್ಲಿದ್ದರೂ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ (BY Vijayendra) ತಾನು ಹೋಗುತ್ತಿರುವುದು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಲು ಮತ್ತು ಹತ್ಯೆಯಿಂದ ಆಕ್ರೋಶಗೊಂಡಿರುವ ಕಾರ್ಯಕರ್ತರನ್ನು ಸಮಾಧಾನಪಡಿಸಲು ಎಂದು ಹೇಳಿದರು. ಪಕ್ಷದಿಂದ ಪ್ರವೀಣ್ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಅವರು ಹೇಳಿದರು.