AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ

ಗೃಹಲಕ್ಷ್ಮಿ ಅಲ್ಲ ಚುನಾವಣಾ ಲಕ್ಷ್ಮೀ: ರಾಜ್ಯ ಸರ್ಕಾರದ ನಡೆಗೆ ವಿಜಯೇಂದ್ರ ವ್ಯಂಗ್ಯ

ಹರೀಶ್ ಜಿ.ಆರ್​.
| Edited By: |

Updated on: Jun 14, 2026 | 11:44 AM

Share

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಭರವಸೆ ನೀಡಿ, ಈಗ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಕಡಿಮೆ ಮಾಡುತ್ತಿದ್ದಾರೆ. ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕ ಸಂಕಷ್ಟದಲ್ಲಿದೆ ಎಂದು ಕಾಂಗ್ರೆಸ್ ಶಾಸಕರೇ ಹೇಳುತ್ತಿದ್ದು, ಅರ್ಹರಿಗೆ ಅನ್ಯಾಯವಾಗುತ್ತಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ.

ಬೆಂಗಳೂರು, ಜೂನ್​​ 14: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ನಿರ್ವಹಣೆ ಬಗ್ಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷವು ಸಾಕಷ್ಟು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದಿತ್ತು. ಆದರೆ, ಈಗ ಗ್ಯಾರಂಟಿಗಳು ಸರಿಯಾಗಿ ತಲುಪುತ್ತಿಲ್ಲ ಮತ್ತು ಸರ್ಕಾರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಎಂದು ಅವರು ಆರೋಪಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯನ್ನು 4-5 ತಿಂಗಳುಗಳ ಕಾಲ ತಡೆಹಿಡಿದು, ಚುನಾವಣೆ ಬಂದಾಗ ಚುನಾವಣಾ ಲಕ್ಷ್ಮಿಯನ್ನಾಗಿ ಪರಿವರ್ತಿಸಲಾಗುತ್ತಿದೆ. ಅಲ್ಲದೆ, ಗ್ಯಾರಂಟಿಗಳಿಂದ ಉಂಟಾದ ಆರ್ಥಿಕ ಸಂಕಷ್ಟವನ್ನು ನಿಭಾಯಿಸಲು ಲಕ್ಷಾಂತರ ಫಲಾನುಭವಿಗಳನ್ನು ಕಡಿತಗೊಳಿಸುವ ದುಸ್ಸಾಹಸಕ್ಕೆ ಸರ್ಕಾರ ಕೈ ಹಾಕಿದೆ ಎಂದು ಅವರು ಟೀಕಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಹರೀಶ್ ಜಿ.ಆರ್​.
ಹರೀಶ್ ಜಿ.ಆರ್​.

ಹರೀಶ್ ಜಿ.ಆರ್ ಮೂಲತಃ ಚಿಕ್ಕಮಗಳೂರಿನವರಾಗಿದ್ದು, ಪೌಢ ಶಿಕ್ಷಣವನ್ನು ಉಜಿರೆಯ ಎಸ್ ಡಿಎಂ ಸಂಸ್ಥೆಯಲ್ಲಿ ಹಾಗೂ ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ದಲ್ಲಿ ಬಿ.ಎ ಪದವಿಯನ್ನು, ಮಾನಸ ಗಂಗೋತ್ರಿಯ EMMRC ಸಂಸ್ಥೆಯ ಎಲೆಕ್ಟ್ರಾನಿಕ್ ಮೀಡಿಯಾ ವಿಷಯದಲ್ಲಿ ಎಂಎಸ್ಸಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಸಧ್ಯ ಪತ್ರಿಕೋದ್ಯಮದಲ್ಲಿ 14 ವರ್ಷದ ಅನುಭವ ಹೊಂದಿರುವ ಇವರು, ದೆಹಲಿಯಲ್ಲಿಯೇ 10 ವರ್ಷಗಳ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದಾರೆ. ರಾಜ್ಯ, ರಾಜಕೀಯ, ರಾಷ್ಟ್ರೀಯ, ಅಂತರರಾಷ್ಟ್ರೀಯ, ಸುಪ್ರೀಂಕೋರ್ಟ್ ವರದಿಗಾರಿಕೆಯಲ್ಲಿ ಅಪಾರ ಅನುಭವ ಹೊಂದಿದ್ದಾರೆ. ಅಯೋಧ್ಯೆ ರಾಮಮಂದಿರದ ತೀರ್ಪು ನಿಂದ ಹಿಡಿದು ಮಂದಿರ ಉದ್ಘಾಟನೆವರೆಗೂ ವರದಿ ಮಾಡಿದ ಅನುಭವ ಹೊಂದಿದ್ದಾರೆ. ಪುಲ್ವಾಮ ಉಗ್ರರ ದಾಳಿ, ಪಹಲ್ಗಾಂ ಉಗ್ರರ ದಾಳಿ, ಆದಾದ ನಂತರದ ಆಪರೇಷನ್ ಸಿಂಧೂರ್ ಕಾರ್ಯಾಚರಣೆಗಳನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಗ್ರೌಂಡ್ ರಿಪೋರ್ಟ್ ಮಾಡಿರುವ ಅನುಭವ ಹೊಂದಿದ್ದಾರೆ.. ಉತ್ತರಖಂಡದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪಗಳನ್ನು ಗ್ರೌಂಡ್ ರಿಪೋರ್ಟ್ ಮಾಡಿದ್ದಾರೆ. 2019‌ ಹಾಗೂ 2024ರ ಲೋಕಸಭಾ ಚುನಾವಣೆಯಲ್ಲಿ ವಿವಿಧ ರಾಜ್ಯಗಳನ್ನು ಸುತ್ತಿ ಜನರ ರಾಜಕೀಯ ನಾಡಿಮಿಡಿತದ ವರದಿ ಮಾಡಿದ್ದಾರೆ.. ಸಧ್ಯ ಇವರು ಬೆಂಗಳೂರಿನಲ್ಲಿ ರಾಜಕೀಯ ವರದಿಗಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.

Read More