AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ, ಕ್ಯಾಂಟೀನ್ ಸೀಜ್!

ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ: ಜಿರಳೆ-ಫಂಗಸ್ ಪತ್ತೆ, ಕ್ಯಾಂಟೀನ್ ಸೀಜ್!

ಅನಿಲ್​ ಕಲ್ಕೆರೆ
| Edited By: |

Updated on: Aug 13, 2026 | 4:40 PM

Share

ಮುಖ್ಯಾಂಶಗಳು

  • ವಿಕಾಸಸೌಧದ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ದಾಳಿ
  • ಕ್ಯಾಂಟೀನ್​ನ ತಟ್ಟೆಗಳ ಶೇಖರಣೆ ಜಾಗದಲ್ಲಿ ಜಿರಳೆಗಳು ಪತ್ತೆ
  • ನಿಯಮ ಉಲ್ಲಂಘನೆ ಹಿನ್ನೆಲೆ ಕ್ಯಾಂಟೀನ್​ಗೆ ಬೀಗ ಹಾಕಿದ ಅಧಿಕಾರಿಗಳು

ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ, ಅಚ್ಚರಿಯ ಸಂಗತಿಗಳನ್ನು ಬಯಲಿಗೆಳೆದಿದ್ದಾರೆ. ತಟ್ಟೆ ಶೇಖರಣಾ ಜಾಗದಲ್ಲಿ ಜಿರಳೆಗಳು ಮತ್ತು ಅಡಿಕೆ ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆಯಾಗಿದೆ. ಸ್ವಚ್ಛತೆ ಕೊರತೆ ಹಾಗೂ ಅವಧಿ ಮೀರಿದ ಪದಾರ್ಥಗಳ ಬಳಕೆ ನಿಯಮ ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಕ್ಯಾಂಟೀನ್‌ಗೆ ಬೀಗ ಜಡಿದು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಬೆಂಗಳೂರು, ಆಗಸ್ಟ್​​ 13: ನಗರದಲ್ಲಿ ಕೆಲ ದಿನಗಳಿಂದ ಆಹಾರ ಇಲಾಖೆ ಅಧಿಕಾರಿಗಳ ದಾಳಿ ಮುಂದುವರೆದಿದ್ದು ಇಂದು ವಿಕಾಸಸೌಧದ ಮೊದಲ ಮಹಡಿಯಲ್ಲಿರುವ ಕ್ಯಾಂಟೀನ್ ಮೇಲೆ ದಾಳಿ ಮಾಡಿದ್ದಾರೆ. ಈ ವೇಳೆ ತಟ್ಟೆಗಳನ್ನು ಶೇಖರಿಸಿಡುವ ಜಾಗದಲ್ಲಿ ಜಿರಳೆಗಳು ಮತ್ತು ಗ್ರಾಹಕರಿಗೆ ಆಹಾರ ನೀಡುವ ಅಡಕೆ ಪ್ಲೇಟ್‌ಗಳ ಮೇಲೆ ಫಂಗಸ್ ಪತ್ತೆಯಾಗಿದ್ದು, ಕ್ಯಾಂಟೀನ್ ಅನ್ನು ಸೀಜ್ ಮಾಡಲಾಗಿದೆ. ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಲೋಪ, ಸ್ವಚ್ಛತೆಯ ಕೊರತೆ, ಅವಧಿ ಮುಗಿದ ಪದಾರ್ಥಗಳ ಬಳಕೆ ಹಾಗೂ ನಿಯಮಿತವಾಗಿ ಪೆಸ್ಟ್ ಕಂಟ್ರೋಲ್ ಮಾಡದಿರುವುದು ಸೇರಿದಂತೆ ವಿವಿಧ ನಿಯಮ ಉಲ್ಲಂಘನೆಗಳು ಕಂಡುಬಂದ ಕಾರಣ ಆಹಾರ ಇಲಾಖೆ ಅಧಿಕಾರಿಗಳು ಕ್ಯಾಂಟೀನ್‌ಗೆ ಬೀಗ ಜಡಿದಿದ್ದು, ಸ್ಥಳದಲ್ಲಿ ‘ತಾತ್ಕಾಲಿಕವಾಗಿ ಕ್ಯಾಂಟೀನ್ ಬಂದ್’ ಎಂಬ ನಾಮಫಲಕವನ್ನು ಅಳವಡಿಸಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow Us
ಅನಿಲ್​ ಕಲ್ಕೆರೆ
ಅನಿಲ್​ ಕಲ್ಕೆರೆ

ಅನಿಲ್ ಕಲ್ಕೆರೆ ಮೂಲತಃ ಬೆಂಗಳೂರಿನವರಾಗಿದ್ದು, ಕಳೆದ 11 ವರ್ಷಗಳಿಂದ ಪತ್ರಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ರಾಜಕೀಯ ವರದಿಗಾರರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕೆ.ಆರ್. ಪುರಂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಸೆಂಟ್ರಲ್ ಕಾಲೇಜು) ದಲ್ಲಿ Msc (ಮಾಸ್ ಕಮ್ಯುನಿಕೇಷನ್) ಸ್ನಾತಕೋತ್ತರ ಪದವಿ ಪೂರೈಸಿದ್ದಾರೆ. ಸೃಜನಶೀಲ ಬರವಣಿಗೆ ಜೊತೆಗೆ ವಿಧಾನಸೌಧದ ಆಡಳಿತಾತ್ಮಕ ಸುದ್ದಿಗಳೂ ಸೇರಿದಂತೆ, ರಾಜಕೀಯ ಪಕ್ಷಗಳು ಹಾಗೂ ರಾಜಕೀಯದ ಪ್ರಸಕ್ತ ವಿದ್ಯಮಾನಗಳನ್ನ ಒಳಗೊಂಡಂತಹ ಸುದ್ದಿಗಳತ್ತ ಗಮನ ಹರಿಸುತ್ತಿದ್ದಾರೆ. ಜೊತೆಗೆ ಪ್ರಜಾಪ್ರಭುತ್ವ ನಾಲ್ಕನೇ ಆಧಾರ ಸ್ತಂಭವಾಗಿ ಸಾಮಾನ್ಯಜನರ ಪರ ಧ್ವನಿಯಾಗಿ ಸರ್ಕಾರಕ್ಕೆ ಸಮಸ್ಯೆ ಮುಟ್ಟಿಸುವ ಸೇತುವೆಯಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದಾರೆ.

Read More