ಕರ್ನಾಟಕದ ಬಗ್ಗೆ ಪ್ರೀತಿ ವ್ಯಕ್ತಪಡಿಸಿದ ‘ತ್ರಿವಿಕ್ರಮ’ ಸಿನಿಮಾ ನಟಿ ಆಕಾಂಕ್ಷಾ ಶರ್ಮಾ
ಈ ಚಿತ್ರಕ್ಕೆ ಕೆ.ಎಂ. ಪ್ರಕಾಶ್ ಸಂಕಲನವಿದೆ. ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಮೊದಲು ರಿಲೀಸ್ ಆಗಿದ್ದ ‘ಪ್ಲೀಸ್ ಮಮ್ಮಿ..’ ಲಿರಿಕಲ್ ಸಾಂಗ್ 75 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿತ್ತು.
ರವಿಚಂದ್ರನ್ (Ravichandran) ಮಗ ವಿಕ್ರಮ್ ರವಿಚಂದ್ರನ್ (Vikram Ravichandran) ನಟನೆಯ ‘ತ್ರಿವಿಕ್ರಮ’ ಸಿನಿಮಾ ಜೂನ್ 24ರಂದು ತೆರೆಗೆ ಬರುತ್ತಿದೆ. ಈ ಸಿನಿಮಾದಲ್ಲಿ ವಿಕ್ಕಿಗೆ ಜೋಡಿಯಾಗಿ ಆಕಾಂಕ್ಷಾ ಶರ್ಮಾ ನಟಿಸಿದ್ದಾರೆ. ಆಕಾಂಕ್ಷಾ ಶರ್ಮಾ ಪರಭಾಷೆಯವರು. ಅವರು ಕರ್ನಾಟಕದ ಬಗ್ಗೆ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ತುಳಸಿ, ಸುಚೇಂದ್ರ ಪ್ರಸಾದ್, ಸಾಧುಕೋಕಿಲ, ರೋಹಿತ್ ರಾಯ್, ಜಯಪ್ರಕಾಶ್, ಶಿವಮಣಿ, ಆದಿ ಲೋಕೇಶ್, ನಾಗೇಂದ್ರ ಶಾ, ಚಿಕ್ಕಣ್ಣ ಸೇರಿದಂತೆ ಅನೇಕರು ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಸಂತೋಷ್ ರೈ ಪತಾಜೆ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಕೆ.ಎಂ. ಪ್ರಕಾಶ್ ಸಂಕಲನವಿದೆ. ಅರ್ಜುನ್ ಜನ್ಯ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಮೊದಲು ರಿಲೀಸ್ ಆಗಿದ್ದ ‘ಪ್ಲೀಸ್ ಮಮ್ಮಿ..’ ಲಿರಿಕಲ್ ಸಾಂಗ್ 75 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿತ್ತು. ಈಗ ವಿಡಿಯೋ ಸಾಂಗ್ ಸದ್ದು ಮಾಡುತ್ತಿದೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
