Kichcha Sudeep: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಸುದೀಪ್-ಪ್ರಿಯಾ ದಂಪತಿ
Kateel Durgaparameshwari Temple: ಕಿಚ್ಚ ಸುದೀಪ್ ಅವರು ಪತ್ನಿ ಪ್ರಿಯಾ ಜೊತೆ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಂದು ಪೂಜೆ ಸಲ್ಲಿಸಿದ್ದಾರೆ. ಖಾಸಗಿ ಕಾರ್ಯಕ್ರಮದ ನಡುವೆ ಅವರು ದೇವರ ದರ್ಶನ ಪಡೆದುಕೊಂಡಿದ್ದಾರೆ.
ನಟ ಕಿಚ್ಚ ಸುದೀಪ್ ಅವರು ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ (Kateel Durgaparameshwari Temple) ಭೇಟಿ ನೀಡಿದ್ದಾರೆ. ಪತ್ನಿ ಪ್ರಿಯಾ (Priya Sudeep) ಜೊತೆ ಖಾಸಗಿ ಕಾರ್ಯಕ್ರಮದ ಸಲುವಾಗಿ ಮಂಗಳೂರಿಗೆ ಬಂದಿರುವ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸುದೀಪ್-ಪ್ರಿಯಾ ದಂಪತಿಗೆ ದೇವಸ್ಥಾನದ ವತಿಯಿಂದ ಗೌರವ ಸಮರ್ಪಣೆ ಮಾಡಲಾಗಿದೆ. ‘ವಿಕ್ರಾಂತ್ ರೋಣ’ ಬಳಿಕ ಸುದೀಪ್ (Kichcha Sudeep) ಅವರು ಹೊಸ ಸಿನಿಮಾ ಅನೌನ್ಸ್ ಮಾಡಿಲ್ಲ. ಸದ್ಯ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರ ನಿರೂಪಣೆ ಮಾಡುತ್ತಿದ್ದಾರೆ. ಮುಂದಿನ ಸಿನಿಮಾ ಬಗ್ಗೆ ಶೀಘ್ರವೇ ಘೋಷಣೆ ಆಗಲಿ ಎಂದು ಫ್ಯಾನ್ಸ್ ಕಾದಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published on: Dec 04, 2022 02:31 PM