‘ವಿಕ್ರಾಂತ್ ರೋಣ’ ಸಿನಿಮಾ ಬಗ್ಗೆ ಅಪಪ್ರಚಾರ; ಗರಂ ಆದ ಜಾಕ್ ಮಂಜು
ಕೆಲವರು ಚಿತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಹಾಕಿ ಸಿನಿಮಾ ಮಾಡಿದ ನಿರ್ಮಾಪಕರಿಗೆ ಇದರಿಂದ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ.
‘ವಿಕ್ರಾಂತ್ ರೋಣ’ ಸಿನಿಮಾ (Vikrant Rona) ದೊಡ್ಡ ಮಟ್ಟದ ಯಶಸ್ಸು ಕಂಡಿದೆ. ಈ ಚಿತ್ರ ಒಳ್ಳೆಯ ಬಿಸ್ನೆಸ್ ಮಾಡುತ್ತಿದೆ. ಈ ಮಧ್ಯೆ ಸೋಶಿಯಲ್ ಮೀಡಿಯಾದಲ್ಲಿ (Social Media) ಕೆಲವರು ಚಿತ್ರದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕೋಟ್ಯಂತರ ರೂಪಾಯಿ ಹಾಕಿ ಸಿನಿಮಾ ಮಾಡಿದ ನಿರ್ಮಾಪಕರಿಗೆ ಇದರಿಂದ ಸಾಕಷ್ಟು ಸಮಸ್ಯೆ ಉಂಟಾಗುತ್ತಿದೆ. ಈ ಬಗ್ಗೆ ನಿರ್ಮಾಪಕ ಜಾಕ್ ಮಂಜು ಅವರು ಅಸಮಾಧಾನ ಹೊರಹಾಕಿದ್ದಾರೆ.