Gadag News: ಯುವತಿ ಜೊತೆ ಅಸಭ್ಯ ವರ್ತನೆ, ಯುವಕನನ್ನ ಕಂಬಕ್ಕೆ ಕಟ್ಟಿ ಹಾಕಿ ಸಾರ್ವಜನಿಕರಿಂದ ಚಪ್ಪಲಿ ಏಟು
ಗದಗದಲ್ಲಿ ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಸ್ಥಳೀಯರು ಧರ್ಮದೇಟು ಕೊಟ್ಟಿದ್ದಾರೆ.
ಗದಗ: ಯುವತಿ ಜೊತೆ ಅಸಭ್ಯವಾಗಿ ವರ್ತಿಸಿದ(Misbehaving) ಎಂಬ ಕಾರಣಕ್ಕೆ ಕಂಬಕ್ಕೆ ಕಟ್ಟಿ ಹಾಕಿ ಯುವಕನನ್ನು(Youth) ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಹೊಳೆ ಆಲೂರು ಗ್ರಾಮದಲ್ಲಿ ನಡೆದಿದೆ. ಯುವತಿಯೊಂದಿಗೆ ಅಸಭ್ಯವಾಗಿ ನಡೆದುಕೊಂಡ ಯುವಕನನ್ನು ಕಂಬಕ್ಕೆ ಕಟ್ಟಿ ಹಾಕಿ ಕೊರಳಿಗೆ ಚಪ್ಪಲಿ ಹಾರ ಹಾಕಿ ಸ್ಥಳೀಯರು ಧರ್ಮದೇಟು ಕೊಟ್ಟಿದ್ದಾರೆ. ರೋಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಯುವಕನನ್ನು ಥಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Published on: Jun 20, 2023 01:02 PM