ಮಕ್ಕಳಿಗೆ ನೀಡಬೇಕಿದ್ದ ಪೌಷ್ಟಿಕ ಆಹಾರ ಕದ್ದು ಸಾಗಾಟ: ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿನ ರೇಷನ್ ಅನ್ನು ಸಿಬ್ಬಂದಿಗಳು ತೆಗೆದುಕೊಂಡು ಹೋಗುತ್ತಿರುವಾಗ ಸ್ಥಳೀಯರು ಹಿಡಿದಿರುವಂತಹ ಘಟನೆ ನಡೆದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗದಗ, ಆಗಸ್ಟ್ 24: ಮಕ್ಕಳಿಗೆ ನೀಡಬೇಕಿದ್ದ ಪೌಷ್ಟಿಕ ಆಹಾರ (food) ಪದಾರ್ಥಗಳನ್ನು ಅಡುಗೆ ಸಿಬ್ಬಂದಿಗಳು ಕದ್ದು ಸಾಗಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿರುವಂತಹ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ನಡೆದಿದೆ. ಶಾಲೆಯ ಐವರು ಅಡುಗೆ ಸಹಾಯಕರಿಂದ ಪೌಷ್ಠಿಕ ಆಹಾರ ಸಾಗಾಟ ಮಾಡಲಾಗುತ್ತಿತ್ತು. 35 ಕೆಜಿ ಅಕ್ಕಿ, ಎರಡು ಕೆಜಿ ಬೇಳೆ, ಹಾಲಿನ ಪುಡಿಯ ಎರಡು ಪ್ಯಾಕೆಟ್, 10 ಕೆಜಿ ಗೋಧಿ ಪ್ಯಾಕೆಟ್ ಸಾಗಾಟ ಮಾಡಲಾಗುತಿತ್ತು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Aug 24, 2024 03:39 PM
Latest Videos