ಮಕ್ಕಳಿಗೆ ನೀಡಬೇಕಿದ್ದ ಪೌಷ್ಟಿಕ ಆಹಾರ ಕದ್ದು ಸಾಗಾಟ: ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು

Edited By:

Updated on: Aug 24, 2024 | 3:40 PM

ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿನ ರೇಷನ್​ ಅನ್ನು ಸಿಬ್ಬಂದಿಗಳು ತೆಗೆದುಕೊಂಡು ಹೋಗುತ್ತಿರುವಾಗ ಸ್ಥಳೀಯರು ಹಿಡಿದಿರುವಂತಹ ಘಟನೆ ನಡೆದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಗದಗ, ಆಗಸ್ಟ್​ 24: ಮಕ್ಕಳಿಗೆ ನೀಡಬೇಕಿದ್ದ ಪೌಷ್ಟಿಕ ಆಹಾರ (food) ಪದಾರ್ಥಗಳನ್ನು ಅಡುಗೆ ಸಿಬ್ಬಂದಿಗಳು ಕದ್ದು ಸಾಗಾಟ ಮಾಡುವಾಗ ರೆಡ್ ಹ್ಯಾಂಡ್ ಆಗಿ ಗ್ರಾಮಸ್ಥರು ಹಿಡಿದಿರುವಂತಹ ಘಟನೆ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಗಂಡು ಮಕ್ಕಳ ಶಾಲೆಯಲ್ಲಿ ನಡೆದಿದೆ. ಶಾಲೆಯ ಐವರು ಅಡುಗೆ ಸಹಾಯಕರಿಂದ ಪೌಷ್ಠಿಕ ಆಹಾರ ಸಾಗಾಟ ಮಾಡಲಾಗುತ್ತಿತ್ತು. 35 ಕೆಜಿ ಅಕ್ಕಿ, ಎರಡು ಕೆಜಿ ಬೇಳೆ, ಹಾಲಿನ ಪುಡಿಯ ಎರಡು ಪ್ಯಾಕೆಟ್, 10 ಕೆಜಿ ಗೋಧಿ ಪ್ಯಾಕೆಟ್ ಸಾಗಾಟ ಮಾಡಲಾಗುತಿತ್ತು. ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Aug 24, 2024 03:39 PM
Follow Us
Sanjeev Pandre

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More