ಚಾಮರಾಜನಗರ: ಚುನಾವಣೆ ಪ್ರಚಾರಕ್ಕೆ ಬಂದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿಗೆ ಗ್ರಾಮಸ್ಥರ ತರಾಟೆ
ಶಿವಪುರ ಗ್ರಾಮಸ್ಥರು ಚುನಾವಣಾ ಪ್ರಚಾರಕ್ಕೆ ಬಂದಿದ್ದ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿಗೆ ಮುತ್ತಿಗೆ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಚಾಮರಾಜನಗರ: ಕರ್ನಾಟಕ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಪ್ರಚಾರಕ್ಕೆ ಹೋಗಿದ್ದ ವೇಳೆ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿಗೆ ಗ್ರಾಮಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಶಿವಪುರ ಗ್ರಾಮಸ್ಥರು ಚುನಾವಣಾ ಪ್ರಚಾರಕ್ಕೆ ಬಂದಿದ್ದ ಶಾಸಕರಿಗೆ ಮುತ್ತಿಗೆ ಹಾಕಿ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ. ಚೆಸ್ಕಾಂ ಸುಖಾಸುಮ್ಮನೆ ಹಬ್ಬದ ದಿನ ವಿದ್ಯುತ್ ಕಟ್ ಮಾಡಿದಾಗ ಸಮಸ್ಯೆಗೆ ಶಾಸಕರು ಸ್ಪಂದಿಸಲಿಲ್ಲ. ಕತ್ತಲಲ್ಲೇ ಹಬ್ಬ ಮಾಡಬೇಕಾಯ್ತು. ಫೋನ್ ಮಾಡಿದ್ರು ಶಾಸಕರು ಸ್ಪಂದಿಸಲಿಲ್ಲ. ಊರಲ್ಲಿ ಒಂದು ಸಮುದಾಯ ಭವನ ಕಟ್ಟಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮರಿಸ್ವಾಮಿ ಗ್ರಾಮಸ್ಥರನ್ನು ಸಮಾಧಾನಪಡಿಸಿದರು.
Follow Us
Latest Videos
ಸೌಜನ್ಯ ಕೇಸ್ ತನಿಖೆಗೆ SIT ಚಾಲನೆ: ಮೊದಲ ಸಭೆ, ಇನ್ ಸೈಡ್ ಮಾಹಿತಿ
ದಸರಾದಲ್ಲಿ ಭಾಗವಹಿಸಲು ಕನ್ನಡ ಚಿತ್ರರಂಗಕ್ಕೆ ಸಿಎಂ ವಿಶೇಷ ಆಹ್ವಾನ
ಸ್ಮಿತ್ ದೀರ್ಘಾಯುಷ್ಯಕ್ಕಾಗಿ ಸೋಮನಾಥ ದೇವಸ್ಥಾನದಲ್ಲಿ ಮಹಾಮೃತ್ಯುಂಜಯ ಜಪ
ವಿಶೇಷಚೇತನರ ಪ್ರತಿಭಟನೆ: ಮಳೆಯಲ್ಲೇ ಸಮಸ್ಯೆ ಆಲಿಸಿದ ಆರ್ ಅಶೋಕ್
