ವರುಣ ವಿಧಾನಸಭಾ ಕ್ಷೇತ್ರದಲ್ಲಿ ಸಿಎಂ ಪುತ್ರ ಯತೀಂದ್ರಗೆ ಘೇರಾವ್, ಗ್ರಾಮಸ್ಥರ ಮಾತಿನ ಚಕಮಕಿ

Edited By: ಆಯೇಷಾ ಬಾನು

Updated on: Mar 08, 2024 | 10:04 AM

ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ಘೇರಾವ್ ಹಾಕಿದ ಘಟನೆ ವರುಣ ಕ್ಷೇತ್ರದ ಮುದ್ದುಬೀರನಹುಂಡಿಯಲ್ಲಿ ನಡೆದಿದೆ. ಗ್ರಾಮಸ್ಥರು ಘೇರಾವ್ ಹಾಕಿ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಒತ್ತಾಯಿಸಿದ್ದು ಮಾತಿನ ಚಕಮಕಿ ನಡೆದಿದೆ.

ಮೈಸೂರು, ಮಾರ್ಚ್​.08: ಮೈಸೂರು ಜಿಲ್ಲೆ ವರುಣ ಕ್ಷೇತ್ರದ ಮುದ್ದುಬೀರನಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ, ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ಘೇರಾವ್ ಹಾಕಿದ್ದಾರೆ. ಗ್ರಾಮದೊಳಗೆ ಪ್ರವೇಶಿಸದಂತೆ ಯತೀಂದ್ರ ಸಿದ್ದರಾಮಯ್ಯಗೆ ಗ್ರಾಮಸ್ಥರು ತಡೆದ ಘಟನೆ ನಡೆದಿದೆ. ಕುಂದುಕೊರತೆ ಸಭೆ ನಡೆಸಲು ತೆರಳಿದ್ದ ವೇಳೆ ಘಟನೆ ನಡೆದಿದೆ.

ಗ್ರಾಮದ ಅಭಿವೃದ್ಧಿ ವಿಚಾರಕ್ಕೆ ಗ್ರಾಮಸ್ಥರು ಯತೀಂದ್ರ ವಿರುದ್ಧ ಗರಂ ಆಗಿದ್ದಾರೆ. ಪೊಲೀಸರ ಮಾತಿಗೂ ಬಗ್ಗದೇ ಸಿಎಂ ಪುತ್ರ ಯತೀಂದ್ರಗೆ ಘೇರಾವ್ ಹಾಕಿದ್ದಾರೆ. ಈ ವೇಳೆ ಹಲವು ವರ್ಷಗಳಿಂದ ರಸ್ತೆ ಅಭಿವೃದ್ಧಿ ಕಾಮಗಾರಿ ನೆನೆಗುದಿಗೆ ಬಿದ್ದಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ಪೂರ್ಣಗೊಳಿಸುವಂತೆ ಗ್ರಾಮಸ್ಥರು ಒತ್ತಾಯ ಮಾಡಿದರು. ಇದೇ ವಿಚಾರಕ್ಕೆ ಯತೀಂದ್ರ & ಗ್ರಾಮಸ್ಥರ ನಡುವೆ ಮಾತಿನ ಚಕಮಕಿ ನಡೆಯಿತು.

ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಾಮ್​, ಮೈಸೂರು

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More