ಮೃತ ದೇವರ ಹಸುವನ್ನು ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ ಮಾಡಿದ ಗ್ರಾಮಸ್ಥರು
ಅನಾರೋಗ್ಯದಿಂದ ಮೃತಪಟ್ಟಿದ್ದರಿಂದ ಗ್ರಾಮಸ್ಥರೆಲ್ಲ ಸೇರಿ ದೇವರ ಹಸುವನ್ನು ಟ್ರ್ಯಾಕ್ಟರ್ ನಲ್ಲಿ ಅದ್ಧೂರಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಗ್ರಾಮದ ಹಳೆಯ ರೇವಣಸಿದ್ಧೇಶ್ವರ ದೇವಸ್ಥಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಇಂಡಿ ತಾಲೂಕಿನ ಹೊರ್ತಿ ಗ್ರಾಮಸ್ಥರ ದೈವಿಭಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ.
ಅನಾರೋಗ್ಯದಿಂದ ಮೃತಪಟ್ಟ ದೇವರ ಹಸುವನ್ನು (god’s cow) ಭವ್ಯ ಮೆರವಣಿಗೆ ಮಾಡಿ, ದೇವಸ್ಥಾನದ ಮುಂದೆಯೇ ಅಂತ್ಯಕ್ರಿಯೆ (Cremation) ಮಾಡಿರುವ ಅಪರೂಪದ ಘಟನೆ ಇಂಡಿ ತಾಲೂಕಿನ ಹೊರ್ತಿಯಲ್ಲಿ (Indi, Vijayapura) ನಡೆದಿದೆ. ಗ್ರಾಮದ ಆರಾಧ್ಯ ದೈವ ಶ್ರೀ ರೇವಣಸಿದ್ಧೇಶ್ವರ ದೇವರಿಗಾಗಿ ಕಳೆದ 15 ವರ್ಷಗಳ ಹಿಂದೆ ಹಸುವನ್ನು ಬಿಡಲಾಗಿತ್ತು. ಯಾವಾಗಲೂ ಗುಡಿಯ ಮುಂದೆಯೇ ಇರುತ್ತಿದ್ದ ಹಸುವಿಗೆ ನಿತ್ಯ ದೇವಸ್ಥಾನಕ್ಕೆ ಬರುತ್ತಿದ್ದ ಭಕ್ತರು ಗೋಮಾತೆ ಎಂದು ಭಕ್ತಿಯಿಂದ ಪೂಜಿಸುತ್ತಿದ್ದರು.
ಅನಾರೋಗ್ಯದಿಂದ ಮೃತಪಟ್ಟಿದ್ದರಿಂದ ಗ್ರಾಮಸ್ಥರೆಲ್ಲ ಸೇರಿ ಟ್ರ್ಯಾಕ್ಟರ್ ನಲ್ಲಿ ಗ್ರಾಮದಲ್ಲಿ ಅದ್ಧೂರಿ ಮೆರವಣಿಗೆ ಮಾಡಿದ್ದಾರೆ. ಬಳಿಕ ಗ್ರಾಮದ ಹಳೆಯ ರೇವಣಸಿದ್ಧೇಶ್ವರ ದೇವಸ್ಥಾನದಲ್ಲಿ ಅಂತ್ಯಕ್ರಿಯೆ ಮಾಡಿದ್ದಾರೆ. ಗ್ರಾಮಸ್ಥರ ದೈವಿಭಕ್ತಿಗೆ ಶ್ಲಾಘನೆ ವ್ಯಕ್ತವಾಗಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಒಬ್ಬ ಮಾಜಿ ಪ್ರಧಾನಿಯ ಸಾವು ಬಯಸುವ ಶಿವರಾಮೇಗೌಡ ಸಂಸ್ಕೃತಿಹೀನ ವ್ಯಕ್ತಿ: ನಿಖಿಲ್ ಕುಮಾರಸ್ವಾಮಿ