ದೇವಸ್ಥಾನ ಕಾರ್ಯಕ್ರಮದಲ್ಲಿ ವಕ್ಫ್​ ಹೆಸರು ಎತ್ತಿದ ಯತ್ನಾಳ್​ಗೆ ತರಾಟೆಗೆ ತೆಗೆದುಕೊಂಡು ಸಾರ್ವಜನಿಕರು

| Updated By: ರಮೇಶ್ ಬಿ. ಜವಳಗೇರಾ

Updated on: Nov 11, 2024 | 4:43 PM

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ದೇವಸ್ಥಾನ ಉದ್ಘಾಟನಾ ಕಾರ್ಯಕ್ರಮದಲ್ಲಿ ವಕ್ಫ್​ ಹೆಸರು ಎತ್ತಿದ್ದಾರೆ. ಇದರಿಂದ ಆಕ್ರೋಶಗೊಂಡಿ ಸ್ಥಳೀಯರು ಇಲ್ಲಿ ರಾಜಕೀಯ ಮಾಡಬೇಡಿ ಎಂದು ಯತ್ನಾಳ್​ಗೆ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಯತ್ನಾಳ್ ಕಾರ್ಯಕ್ರಮದಿಂದ ಹೊರ ನಡೆದರು.​

ಬಾಗಲಕೋಟೆ, (ನವೆಂಬರ್ 11): ವಕ್ಫ್​ ಆಸ್ತಿ ವಿವಾದ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕದಲ್ಲಿ ಮೊದಲಿಗೆ ವಿಜಯಪುರದಲ್ಲಿ ರೈತರ ಜಮೀನಿನ ಪಹಣಿಯಲ್ಲಿ ವಕ್ಫ್​ ಎಂದು ಹೆಸರು ನಮೂದಾಗಿರುವುದು ಕಂಡುಬಂದಿದೆ. ಅಲ್ಲದೇ ಈ ವಿಚಾರವಾಗಿ ರೈತರಿಗೆ ನೋಟಿಸ್ ಸಹ ನೀಡಲಾಗಿದೆ. ಈ ಬಗ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಧ್ವನಿ ಎತ್ತಿದ್ದಾರೆ. ಇನ್ನು ಇದೇ ವಿಚಾರವನ್ನು ಯತ್ನಾಳ್, ಬಾಗಲಕೋಟೆ ಜಿಲ್ಲೆ ತೇರದಾಳ ಪಟ್ಟಣದಲ್ಲಿ ಅಲ್ಲಮಪ್ರಭು ದೇವಸ್ಥಾನ ಉದ್ಘಾಟನೆ ಕಾರ್ಯಕ್ರಮದಲ್ಲೂ ಪ್ರಸ್ತಾಪಿಸಿದ್ದಾರೆ. ಆದ್ರೆ, ಸ್ಥಳೀಯರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದು, ಇಲ್ಲಿ ರಾಜಕೀಯ ಮಾಡಬೇಡಿ. ಇದು ಯಾವ ಕಾರ್ಯಕ್ರಮ ನೀವು ಏನು ಮಾತಾಡ್ತೀರಿ? ದೇವಸ್ಥಾನ ನಿರ್ಮಾಣಕ್ಕೆ ಎಲ್ಲಾ ಸಮುದಾಯ ದೇಣಿಗೆ ಕೊಟ್ಟಿದೆ. ಮುಸ್ಲಿಮರು 6 ಲಕ್ಷ ರೂ. ದೇಣಿಗೆ ಕೊಟ್ಟಿದ್ದಾರೆಂದು ಎಂದು ತರಾಟೆಗೆ ತೆಗೆದುಕೊಂಡರು. ಬಳಿಕ ಯತ್ನಾಳ್ ಭಾಷಣ ಅರ್ಧಕ್ಕೆ ನಿಲ್ಲಿಸಿ ವೇದಿಕೆಯಿಂದ ಕೆಳಗಿಳಿದು ಹೋದರು.