ಮೊದಲ ಬಾರಿ ವಿನಯ್ ವಿರುದ್ಧ ತೊಡೆತಟ್ಟಿದ ಸಂತೋಷ್; ಭರ್ಜರಿ ಕಿತ್ತಾಟ

Updated on: Nov 17, 2023 | 10:06 AM

ವಿನಯ್ ಗೌಡ ಹಾಗೂ ತುಕಾಲಿ ಸಂತೋಷ್ ಒಂದೇ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ. ವಿನಯ್ ಅವರ ನಿಜವಾದ ಮುಖ ತುಕಾಲಿ ಸಂತೋಷ್​ಗೆ ತಿಳಿದಿದೆ. ಈ ಕಾರಣದಿಂದಲೇ ವಿನಯ್ ಗೌಡ ವಿರುದ್ಧ ತಿರುಗಿಬಿದ್ದಿದ್ದಾರೆ.

ವಿನಯ್ ಗೌಡ ಹಾಗೂ ತುಕಾಲಿ ಸಂತೋಷ್ (Tukali Santosh) ಒಂದೇ ಗುಂಪಿನಲ್ಲಿ ಗುರುತಿಸಿಕೊಂಡಿದ್ದರು. ಆದರೆ, ಈಗ ಇಬ್ಬರೂ ಬೇರೆ ಆಗಿದ್ದಾರೆ. ವಿನಯ್ ಅವರ ನಿಜವಾದ ಮುಖ ತುಕಾಲಿ ಸಂತೋಷ್​ಗೆ ತಿಳಿದಿದೆ. ಈ ಕಾರಣದಿಂದಲೇ ವಿನಯ್ ಗೌಡ ವಿರುದ್ಧ ತಿರುಗಿಬಿದ್ದಿದ್ದಾರೆ. ಇಷ್ಟು ದಿನ ಇಬ್ಬರೂ ಮುನಿಸು ತೋರಿಸಿದ್ದರು. ಆದರೆ, ಓಪನ್ ಆಗಿ ಮಾತನಾಡಿಕೊಂಡಿರಲಿಲ್ಲ. ಈಗ ಇದೇ ಮೊದಲ ಬಾರಿಗೆ ವಿನಯ್ ವಿರುದ್ಧ ಸಂತೋಷ್ ಅವರು ತೊಡೆತಟ್ಟಿದ್ದಾರೆ. ವಿನಯ್ ವಿರುದ್ಧ ಕೂಗಾಡಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್​ಗೆ ಯಾರೆಲ್ಲ ಅರ್ಹರು ಎಂಬ ವಿಚಾರದಲ್ಲಿ ವಿನಯ್ ಹಾಗೂ ಸಂತೋಷ್ ಕಿತ್ತಾಡಿಕೊಂಡಿದ್ದಾರೆ. ಈ ಪ್ರೋಮೋ ವೈರಲ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Nov 17, 2023 09:04 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More