‘ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಡ್ತಾರೆ’; ವಿನಯ್ ಹೀಗೆ ಹೇಳಿದ್ದು ಯಾರಿಗೆ?

Updated on: Jan 13, 2024 | 9:40 AM

ವೈಯಕ್ತಿಕ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರದ್ದು 200 ಅಂಕ ದಾಟದಂತೆ ಮಾಡಿದ್ದು ತುಕಾಲಿ ಸಂತೋಷ್ ಎಂದು ವಿನಯ್ ಅಭಿಪ್ರಾಯ ಹೊರಹಾಕಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ (Vinay Gowda) ಅವರ ಗೇಮ್ ಎಲ್ಲರ ಗಮನ ಸೆಳೆಯುತ್ತಿದೆ. ಅವರು ಹಲವರ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ ಇರುತ್ತಾರೆ. ಈಗ ಅವರು ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಬಗ್ಗೆ ಮಾತನಾಡಿದ್ದಾರೆ. ವೈಯಕ್ತಿಕ ಟಾಸ್ಕ್​ನಲ್ಲಿ ವರ್ತೂರು ಸಂತೋಷ್ ಅವರದ್ದು 200 ಅಂಕ ದಾಟದಂತೆ ಮಾಡಿದ್ದು ತುಕಾಲಿ ಸಂತೋಷ್ ಎಂದು ವಿನಯ್ ಅಭಿಪ್ರಾಯ ಹೊರಹಾಕಿದ್ದಾರೆ. ‘ಒಂದೇ ತಟ್ಟೆಯಲ್ಲಿ ಅನ್ನ ತಿಂದು ಮುಹೂರ್ತ ಇಡ್ತಾರೆ’ ಎಂದು ಹೇಳಿದ್ದಾರೆ. ತುಕಾಲಿ ಸಂತೋಷ್ ಅವರನ್ನು ಶಕುನಿ ಎಂದು ವಿನಯ್ ಕರೆದಿದ್ದಾರೆ. ಕಲರ್ಸ್ ಕನ್ನಡದಲ್ಲಿ ಎಪಿಸೋಡ್ ಹಾಗೂ ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್ ದುಗ್ಗುಮನೆಯವರು ಮೂಲತಃ ಉತ್ತರ ಕನ್ನಡದ ಶಿರಸಿಯವರು. ಇವರು ಪತ್ರಿಕಾ ರಂಗಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More