ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ಆನೆ ವಿನಯ್ ಕೊಟ್ಟ ಮಾಹಿತಿ

‘ಡೆವಿಲ್’ ಸಿನಿಮಾ ಚಿತ್ರೀಕರಣದ ಸಮಯದಲ್ಲಿ ದರ್ಶನ್ ಅವರನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ‘ಡೆವಿಲ್’ ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿರುವ ವಿನಯ್, ಆ ದಿನ ಸೆಟ್​ನಲ್ಲಿ ಏನಾಯ್ತು ಎಂಬ ಬಗ್ಗೆ ಮಾತನಾಡಿದ್ದಾರೆ.

ದರ್ಶನ್ ಬಂಧನದ ದಿನ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನಾಯ್ತು? ಆನೆ ವಿನಯ್ ಕೊಟ್ಟ ಮಾಹಿತಿ
|

Updated on: Jun 28, 2024 | 7:06 PM

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನವಾಗಿದೆ. ಮೈಸೂರಿನಲ್ಲಿ ‘ಡೆವಿಲ್’ ಸಿನಿಮಾದ ಚಿತ್ರೀಕರಣಕ್ಕೆ ತೆರಳುತ್ತಿದ್ದ ವೇಳೆ ದರ್ಶನ್ ಅನ್ನು ಪೊಲೀಸರು ಬಂಧಿಸಿದ್ದರು. ‘ಡೆವಿಲ್’ ಸಿನಿಮಾನಲ್ಲಿ ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟ ವಿನಯ್ ವಿಲನ್ ಆಗಿ ನಟಿಸುತ್ತಿದ್ದಾರೆ. ಬಂಧನವಾದ ದಿನವೂ ವಿನಯ್ ಸಹ ಶೂಟಿಂಗ್ ಸೆಟ್​ನಲ್ಲಿದ್ದರು. ಅಂದು ಅವರದ್ದೇ ಸೀನ್​ನ ಚಿತ್ರೀಕರಣವಾಗುತ್ತಿತ್ತು. ದರ್ಶನ್ ಬಂಧನವಾದಾಗ ‘ಡೆವಿಲ್’ ಸಿನಿಮಾ ಸೆಟ್​ನಲ್ಲಿ ಏನೇನಾಯ್ತು? ಅಂದು ದರ್ಶನ್ ಮನಸ್ಥಿತಿ ಹೇಗಿತ್ತು? ‘ಡೆವಿಲ್’ ಸಿನಿಮಾದ ಚಿತ್ರೀಕರಣದ ಕತೆ ಏನು? ಹಲವು ವಿಷಯಗಳ ಬಗ್ಗೆ ವಿನಯ್ ಟಿವಿ9 ಕನ್ನಡದ ಜೊತೆಗೆ ಮಾತನಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us