AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದ ಹೋರಾಟಗಾರ ಬಸವರಾಜ್ ಕೊರವರ್

ವಿನಯ್ ಕುಲಕರ್ಣಿಗೆ ಜಾಮೀನು: ಸುಪ್ರೀಂ ಕೋರ್ಟ್ ಮೊರೆ ಹೋಗುತ್ತೇವೆಂದ ಹೋರಾಟಗಾರ ಬಸವರಾಜ್ ಕೊರವರ್

ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
| Edited By: |

Updated on: Jul 31, 2026 | 1:10 PM

Share

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್ ನೀಡಿರುವ ತಡೆಯಾಜ್ಞೆ ಕುರಿತು ಹೋರಾಟಗಾರ ಬಸವರಾಜ್ ಕೊರವರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಗಂಭೀರ ಪ್ರಕರಣಗಳಲ್ಲಿ ಜಾಮೀನು ಕೂಡ ಸಿಗಬಾರದು ಎಂದ ಅವರು, ನ್ಯಾಯಾಲಯದ ಆದೇಶವನ್ನು ಗೌರವಿಸುತ್ತಾ, ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ವಿನಯ್ ಕುಲಕರ್ಣಿ ಪ್ರಭಾವಿ ವ್ಯಕ್ತಿ ಆಗಿದ್ದರಿಂದ ಹೋರಾಟ ಮುಂದುವರಿಯಲಿದೆ.

ಧಾರವಾಡ, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಹೈಕೋರ್ಟ್‌ನಿಂದ ತಡೆಯಾಜ್ಞೆ ದೊರೆತಿರುವ ಬಗ್ಗೆ ಹೋರಾಟಗಾರ ಬಸವರಾಜ್ ಕೊರವರ್ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಇಂತಹ ಹೈ ಪ್ರೊಫೈಲ್ ಕ್ರಿಮಿನಲ್ ಪ್ರಕರಣಗಳಲ್ಲಿ ಜಾಮೀನು, ತಡೆಯಾಜ್ಞೆ ಕೂಡ ಸಿಗಬಾರದು ಎಂದು ಅವರು ಅಭಿಪ್ರಾಯಪಟ್ಟರು. ನ್ಯಾಯಾಲಯದ ಆದೇಶವನ್ನು ಗೌರವಿಸುವುದಾಗಿ ಹೇಳಿದ ಅವರು, ಆದೇಶದ ಸಂಪೂರ್ಣ ಪ್ರತಿ ಬಂದ ನಂತರ, ಯಾವ ಅಂಶಗಳ ಆಧಾರದ ಮೇಲೆ ಹೈಕೋರ್ಟ್ ಈ ತಡೆಯಾಜ್ಞೆ ನೀಡಿದೆ ಎಂಬುದನ್ನು ಪರಿಶೀಲಿಸಲಾಗುವುದು ಎಂದರು. ಈಗಾಗಲೇ ಗುರುನಾಥ್ ಗೌಡ ಅವರೊಂದಿಗೆ ಚರ್ಚಿಸಿ, ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ವಿನಯ್ ಕುಲಕರ್ಣಿ ಅವರು ರಾಜಕೀಯವಾಗಿ ಪ್ರಭಾವಶಾಲಿ ಮತ್ತು ಹಣವಂತ ವ್ಯಕ್ತಿಯಾಗಿರುವುದರಿಂದ ಈ ಹೋರಾಟ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ವರೆಗೂ ಮುಂದುವರೆಯುವುದು ಅನಿವಾರ್ಯ ಎಂದು ಕೊರವರ್ ಹೇಳಿದರು. ನ್ಯಾಯಾಂಗ ವ್ಯವಸ್ಥೆಯ ಮೇಲೆ ನಂಬಿಕೆ ಇಟ್ಟಿದ್ದರೂ, ಈ ತಡೆಯಾಜ್ಞೆ ನೀಡಿರುವುದು ಬೇಸರ ತಂದಿದೆ ಎಂದು ಅವರು ಹೇಳಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ
ನರಸಿಂಹಮೂರ್ತಿ ಪ್ಯಾಟಿ, ಧಾರವಾಡ

ಕೊಪ್ಪಳದವರಾದ ನರಸಿಂಹಮೂರ್ತಿ ಪ್ಯಾಟಿ ಸದ್ಯ ಟಿವಿ9 ವಾಹಿನಿಯ ಧಾರವಾಡ ಜಿಲ್ಲಾ ಹಿರಿಯ ವರದಿಗಾರರು. ಮೆಕ್ಯಾನಿಕಲ್ ಇಂಜನಿಯರಿಂಗ್ ಮುಗಿಸಿರುವ ಇವರು, ಕೆಲವರ್ಷ ಕೊಪ್ಪಳ ಜಿಲ್ಲೆಯಲ್ಲಿ ಐಟಿಐ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸಿದ್ದಾರೆ. 23 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯರಾಗಿದ್ದು, ಮೊದಲು ಕೊಪ್ಪಳ ಜಿಲ್ಲೆ, ನಂತರ ಧಾರವಾಡ ಜಿಲ್ಲಾ ಹಿರಿಯ ವರದಿಗಾರರಾಗಿ ಕಳೆದ 20 ವರ್ಷಗಳಿಂದ ಟಿವಿ9 ವಾಹಿನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವರದಿಗಾರಿಕೆಯ ಜೊತೆಗೆ ಪ್ರಬಂಧ ರಚನೆ ಇವರ ಆಸಕ್ತಿಯಾಗಿದ್ದು ಈಗಾಗಲೇ 'ಬ್ರಾಹ್ಮಣ ಕುರುಬ' ಮತ್ತು 'ಕೃಷ್ಣಾಚಾರ್ @ ಕಿಷ್ಕಿಂಧಾ ಬಾರ್' ಪ್ರಬಂಧ ಸಂಕಲನಗಳನ್ನು ಪ್ರಕಟಿಸಿದ್ದಾರೆ. ಅವರ ಪ್ರಬಂಧಗಳು ಕಥನದ ಚೆಲುವು, ಸೊಬಗು ಮತ್ತು ಅರ್ಥವ್ಯಾಪ್ತಿಯಿಂದಾಗಿ ಓದುಗನ ಮನ ತಣಿಸುತ್ತವೆ ಎಂದು ವಿಮರ್ಶಕರು ಗುರುತಿಸಿದ್ದಾರೆ. ಸಾವಯವ ಹಾಗೂ ಅರಣ್ಯ ಕೃಷಿಕರೂ ಆಗಿರುವ ನರಸಿಂಹಮೂರ್ತಿ ಪ್ಯಾಟಿ ಸಂಗೀತ, ಟ್ರೆಕ್ಕಿಂಗ್, ಪ್ರವಾಸಗಳಲ್ಲೂ ಆಸಕ್ತಿ ಹೊಂದಿದ್ದಾರೆ.

Read More