AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ

ರಾಮು, ಆನೇಕಲ್​
| Edited By: |

Updated on:Jul 31, 2026 | 11:04 PM

Share

ಮುಖ್ಯಾಂಶಗಳು

  • ಧಾರವಾಡ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಕೇಸ್​​
  • ಪರಪ್ಪನ ಅಗ್ರಹಾರ ಜೈಲಿನಿಂದ ವಿನಯ್ ಕುಲಕರ್ಣಿ ಬಿಡುಗಡೆ
  • ವಿನಯ್ ಕುಲಕರ್ಣಿಗೆ ಹೂವಿನ ಹಾರ ಹಾಕಿ ಸ್ವಾಗತಿಸಿದ ಅಭಿಮಾನಿಗಳು

ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದ ಮಾಜಿ ಶಾಸಕ ವಿನಯ್ ಕುಲಕರ್ಣಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ನ್ಯಾಯಾಲಯದಿಂದ ಜಾಮೀನು ಮಂಜೂರಾದ ನಂತರ, ಅವರು ನಗುನಗುತ್ತಲೇ ಹೊರಬಂದರು. ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಕುಲಕರ್ಣಿ, ತಮ್ಮ ಬೆಂಬಲಿಗರೊಂದಿಗೆ ಸ್ಥಳದಿಂದ ನಿರ್ಗಮಿಸಿದರು.

ಆನೇಕಲ್​, ಜುಲೈ 31: ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಇಂದು ಹೈಕೋರ್ಟ್​ನಿಂದ ಜಾಮೀನು ಮಂಜೂರು ಮಾಡಲಾಗಿದೆ. ಈ ಬೆನ್ನಲ್ಲೇ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ. ಈ ಸಂದರ್ಭದಲ್ಲಿ ನಗುನಗುತ್ತಲೇ ಕಾಣಿಸಿಕೊಂಡರು. ಜಾಮೀನು ಪ್ರಕ್ರಿಯೆ ಪೂರ್ಣಗೊಂಡ ನಂತರ ಜೈಲಿನಿಂದ ಹೊರಬಂದ ವಿನಯ್ ಕುಲಕರ್ಣಿಗೆ ಅಭಿಮಾನಿಗಳು ಹೂವಿನ ಹಾರ ಹಾಕಿ ಸ್ವಾಗತಿಸಿದರು. ಇನ್ನು ಈ ವೇಳೆ ಅಲ್ಲಿ ನೆರೆದಿದ್ದ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಲು ವಿನಯ್ ಕುಲಕರ್ಣಿ ನಿರಾಕರಿಸಿದರು. ವಿನಯ್ ಕುಲಕರ್ಣಿ ಬಿಡುಗಡೆಗೊಂಡಿರುವುದು ಧಾರವಾಡ ರಾಜಕೀಯ ವಲಯದಲ್ಲಿ ಈ ಬೆಳವಣಿಗೆ ಮಹತ್ವ ಪಡೆದಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Jul 31, 2026 11:03 PM

Follow Us