‘ಎಕ್ಕ’ ಚಿತ್ರ ನೋಡಿದ ವಿನಯ್ ರಾಜ್​ಕುಮಾರ್​; ತಮ್ಮನ ಸಿನಿಮಾ ಇಷ್ಟ ಆಯ್ತಾ?

Updated on: Jul 18, 2025 | 7:28 PM

ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಸಿನಿಮಾ ಬಿಡುಗಡೆ ಆಗಿದ್ದು, ಮೊದಲ ದಿನವೇ ಪ್ರೇಕ್ಷಕರು ಕಣ್ತುಂಬಿಕೊಂಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವ ರಾಜ್​ಕುಮಾರ್ ಸಹೋದರ ವಿನಯ್ ರಾಜ್​ಕುಮಾರ್ ಅವರು ಸಿನಿಮಾ ನೋಡಿದ್ದಾರೆ. ಬಳಿಕ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ಯುವ ರಾಜ್​ಕುಮಾರ್ ನಟನೆಯ ‘ಎಕ್ಕ’ ಸಿನಿಮಾ (Ekka Movie) ಬಿಡುಗಡೆ ಆಗಿದ್ದು, ಮೊದಲ ದಿನವೇ ಪ್ರೇಕ್ಷಕರು ಕಣ್ತುಂಬಿಕೊಂಡಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಯುವ ರಾಜ್​ಕುಮಾರ್ (Yuva Rajkumar) ಸಹೋದರ ವಿನಯ್ ರಾಜ್​ಕುಮಾರ್ ಅವರು ಸಿನಿಮಾ ನೋಡಿದ್ದಾರೆ. ಬಳಿಕ ಅವರು ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ‘ಈ ಸಿನಿಮಾಗಾಗಿ ನಾನು ಕೂಡ ಕಾಯುತ್ತಿದ್ದೆ. ಚಿತ್ರಮಂದಿರದಲ್ಲಿ ಇಷ್ಟೊಂದು ಜನರು ಎಂಜಾಯ್ ಮಾಡಿದ್ದು ನೋಡಿ ತುಂಬಾ ಖುಷಿ ಆಯಿತು. ನಮ್ಮ ತಮ್ಮ ತುಂಬ ಚೆನ್ನಾಗಿ ಮಾಡಿದ್ದಾನೆ’ ಎಂದು ವಿನಯ್ ರಾಜ್​ಕುಮಾರ್ (Vinay Rajkumar) ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More