‘ಚಿಕ್ಕಪ್ಪನ ಮಿಸ್ ಮಾಡಿಕೊಳ್ತಾ ಇದೀನಿ, ಅವರು ಈಗ ಇರಬೇಕಿತ್ತು’; ಭಾವುಕರಾದ ವಿನಯ್ ರಾಜ್​ಕುಮಾರ್

Updated on: Feb 10, 2024 | 8:19 AM

ವಿನಯ್ ರಾಜ್​ಕುಮಾರ್ ನಟನೆಯ, ಸುನಿ ನಟನೆಯ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಗೆದ್ದಿದೆ. ಈ ಚಿತ್ರದಲ್ಲಿ  ಮಲ್ಲಿಕಾ ಸಿಂಗ್​, ಸ್ವಾದಿಷ್ಟಾ, ರಾಜೇಶ್ ನಟರಂಗ, ಸಾಧು ಕೋಕಿಲ ಮೊದಲಾದವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ವಿನಯ್ ರಾಜ್​ಕುಮಾರ್ ಮಾತನಾಡಿದ್ದಾರೆ. ಅವರಿಗೆ ಪುನೀತ್ ನೆನಪಾಗಿದೆ.

ವಿನಯ್ ರಾಜ್​ಕುಮಾರ್ (Vinay Rajkumar) ನಟನೆಯ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಗೆದ್ದಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಇತ್ತು. ಆ ನಿರೀಕ್ಷೆಯನ್ನು ಸಿನಿಮಾ ತಲುಪಿದೆ. ಸಿಂಪಲ್ ಸುನಿ ಅವರು ಈ ಚಿತ್ರದಿಂದ ಗೆದ್ದಿದ್ದಾರೆ. ಈ ಚಿತ್ರದಲ್ಲಿ  ಮಲ್ಲಿಕಾ ಸಿಂಗ್​, ಸ್ವಾದಿಷ್ಟಾ, ರಾಜೇಶ್ ನಟರಂಗ, ಸಾಧು ಕೋಕಿಲ ಮೊದಲಾದವರು ನಟಿಸಿದ್ದಾರೆ. ಕಾರ್ತಿಕ್​ ಮಹೇಶ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಗುತ್ತಿರುವ ಬಗ್ಗೆ ವಿನಯ್ ರಾಜ್​ಕುಮಾರ್ ಮಾತನಾಡಿದ್ದು, ಪುನೀತ್​​ ಬಗ್ಗೆ ಮಾತನಾಡಿದ್ದಾರೆ. ‘ಚಿಕ್ಕಪ್ಪನ ಮಿಸ್ ಮಾಡಿಕೊಳ್ತಾ ಇದೀನಿ. ಅವರು ಈಗ ಇರಬೇಕಿತ್ತು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More