‘ಒಂದು ಸರಳ ಪ್ರೇಮಕಥೆ’ಗಾಗಿ ಬೆಂಗಳೂರಿನಿಂದ ಮೈಸೂರಿಗೆ ರ್ಯಾಲಿ
Vinay Rajkumar: ದೊಡ್ಮನೆ ಕುಡಿ ವಿನಯ್ ರಾಜ್ಕುಮಾರ್ ನಟಿಸಿ ಸಿಂಪಲ್ ಸುನಿ ನಿರ್ದೇಶನ ಮಾಡಿರುವ ‘ಒಂದು ಸರಳ ಪ್ರೇಮಕಥೆ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ.
ದೊಡ್ಮನೆ ಕುಡಿ ವಿನಯ್ ರಾಜ್ಕುಮಾರ್ (Vinay Rajkumar) ನಟನೆಯ ‘ಒಂದು ಸರಳ ಪ್ರೇಮಕಥೆ’ (Ondu Sarala Premakathe) ಸಿನಿಮಾ ಫೆಬ್ರವರಿ 8ಕ್ಕೆ ಬಿಡುಗಡೆ ಆಗಲಿದೆ. ಮಲ್ಟಿಪ್ಲೆಕ್ಸ್ಗಳಲ್ಲಿ ಫೆಬ್ರವರಿ 8ಕ್ಕೆ ಹಾಗೂ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲಿ ಫೆಬ್ರವರಿ 9ಕ್ಕೆ ಸಿನಿಮಾ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರ ಕಾರ್ಯದಲ್ಲಿ ಚಿತ್ರತಂಡ ತೊಡಗಿಸಿಕೊಂಡಿದೆ. ಚಿತ್ರತಂಡ ಬೆಂಗಳೂರಿನಿಂದ ಮೈಸೂರಿಗೆ ರ್ಯಾಲಿ ಮಾಡುತ್ತಿದ್ದು, ರಸ್ತೆ ಮಧ್ಯೆ ಸಿಗುವ ಮುಖ್ಯವಾದ ನಗರ-ಪಟ್ಟಣಗಳಲ್ಲಿ ಸಿನಿಮಾದ ಕುರಿತು ಪ್ರಚಾರ ಮಾಡಲಿದ್ದಾರೆ. ಹುಬ್ಬಳ್ಳಿ, ಧಾರವಾಡ, ಬೆಳಗಾವಿ ಇನ್ನೂ ಹಲವು ಕಡೆ ಈಗಾಗಲೇ ಪ್ರಚಾರ ಮಾಡಿದೆ ಚಿತ್ರತಂಡ. ಸಿನಿಮಾವನ್ನು ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos