‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ

Edited By:

Updated on: Aug 06, 2026 | 8:30 PM

ದುನಿಯಾ ವಿಜಯ್ ಅವರ ಪುತ್ರಿ ಮೋನಿಷಾ ಹಾಗೂ ನಟ ವಿನಯ್ ರಾಜ್​ಕುಮಾರ್ ಅವರು ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ದುನಿಯಾ ವಿಜಯ್ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾದಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಲೋಕ ಅನಾವರಣ ಆಗಲಿದೆ. ಆ ಬಗ್ಗೆ ವಿನಯ್ ರಾಜ್​ಕುಮಾರ್ ಮಾತನಾಡಿದ್ದಾರೆ.

ದುನಿಯಾ ವಿಜಯ್ ಅವರ ಪುತ್ರಿ ಮೋನಿಷಾ ಹಾಗೂ ನಟ ವಿನಯ್ ರಾಜ್​ಕುಮಾರ್ (Vinay Rajkumar) ಅವರು ‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈ ಚಿತ್ರಕ್ಕೆ ದುನಿಯಾ ವಿಜಯ್ ನಿರ್ದೇಶನ ಮಾಡಿದ್ದಾರೆ. ‘ಈ ಸಿನಿಮಾದಿಂದ ನಾನು ಸಾಕಷ್ಟು ವಿಷಯ ಕಲಿತೆ. ಬೆಂಗಳೂರಿಗೆ ಬೇರೆ ಬೇರೆ ಊರುಗಳಿಂದ ಪ್ರತಿ ದಿನ ಸಾವಿರಾರು ಜನರು ಬರುತ್ತಾರೆ. ನನ್ನ ಪಾತ್ರ ಕೂಡ ಈ ಸಿನಿಮಾದಲ್ಲಿ ಹಾಗೆಯೇ ಇದೆ. ಪ್ರೇಕ್ಷಕರಿಗೆ ನನ್ನ ಪಾತ್ರ ಕನೆಕ್ಟ್ ಆಗುತ್ತದೆ. ಮೆಜೆಸ್ಟಿಕ್​ನಲ್ಲಿ ಜನರಿಗೆ ಹಲವು ರೀತಿಯ ಅನುಭವ ಆಗುತ್ತದೆ. ಮೆಜೆಸ್ಟಿಕ್ ಎಂದರೆ ಏನು ಎಂಬುದು ಗೊತ್ತೇ ಇಲ್ಲದ ಜನರಿಗೂ ಕೂಡ ಈ ಸಿನಿಮಾ ಒಂದು ರೀತಿ ಅನುಭವ ನೀಡುತ್ತದೆ’ ಎಂದು ವಿನಯ್ ರಾಜ್​ಕುಮಾರ್ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಾಲತೇಶ ಜಗ್ಗೀನ್

ಮಾಲತೇಶ ಜಗ್ಗೀನ್. Tv9 ಕನ್ನಡ ವಾಹಿನಿ ಫಿಲಂ ಬ್ಯೂರೋ ಮುಖ್ಯಸ್ಥನಾಗಿ ಕೆಲಸ ಮಾಡ್ತಿದ್ದಾರೆ. ಮಾಲತೇಶ ವಿಜಯನಗರ ಜಿಲ್ಲೆ ಹೂವಿನ ಹಡಗಲಿ ತಾಲ್ಲೂಕು ಹೊಳಲು ಗ್ರಾಮದವರು. ಕಳೆದ 15 ವರ್ಷಗಳಲ್ಲಿ ಮಾಧ್ಯಮ ಲೋಕದ ವಿವಿಧ ವಿಭಾಗಗಳಲ್ಲಿ ವರದಿಗಾರಿಕೆ ಮಾಡಿದ ಅನುಭವ ಇದೆ. ಸಿನಿಮಾ ವಿಭಾಗದ ಜೊತೆ ರಾಜಕೀಯ, ಮೆಟ್ರೋ, ಕ್ರೈಂ ವಿಭಾಗದಲ್ಲೂ ಕೆಲವು ಸನ್ನಿವೇಶಗಳಲ್ಲಿ ವರದಿಗಾರಿಕೆ ಮಾಡಿದ್ದಾರೆ. ಹಾವೇರಿಯ ಕೆಎಫ್ ಚಾನಲ್ , ನಂತರ ಬೆಂಗಳೂರಿನ ಸಮಯ ನ್ಯೂಸ್, ಜನಶ್ರಿ ನ್ಯೂಸ್, ಪಬ್ಲಿಕ್ ಟಿವಿ ಸೇರಿದಂತೆ ವಿವಿಧ ವಾಹಿನಿಗಳಲ್ಲಿ ಕೆಲಸ ಮಾಡಿದ ಅನುಭವ ಇದೆ. Tv9kannada ನ್ಯೂಸ್ ಚಾನಲ್ ನಲ್ಲಿ ಕಳೆದ 10 ವರ್ಷಗಳಿಂದ ಇದ್ದಾರೆ. ಕಲೆ, ಸಾಹಿತ್ಯ, ಸಿನಿಮಾ, ಕ್ರಿಡೆ ಆಸಕ್ತಿ ವಿಷಯಗಳು.

Read More