ನಾಲ್ಕು ವರ್ಷಗಳ ಹಿಂದೆ ಸೆಟ್ಟೇರಿದ್ದ ‘ಗ್ರಾಮಾಯಣ’ಕ್ಕೆ ಮತ್ತೆ ಮುಹೂರ್ತ; ವಿನಯ್ ರಾಜ್​ಕುಮಾರ್ ಹೇಳಿದ್ದಿಷ್ಟು

Updated on: Jun 09, 2023 | 8:05 AM

ನಾಲ್ಕು ವರ್ಷಗಳ ಹಿಂದೆ ವಿನಯ್ ರಾಜ್​ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು.

ನಾಲ್ಕು ವರ್ಷಗಳ ಹಿಂದೆ ‘ಗ್ರಾಮಾಯಣ’ ಚಿತ್ರಕ್ಕೆ ಮುಹೂರ್ತ ನೆರವೇರಿತ್ತು. ವಿನಯ್ ರಾಜ್​ಕುಮಾರ್ (Vinay Rajkumar) ಅವರು ಈ ಚಿತ್ರಕ್ಕೆ ಹೀರೋ ಆಗಿ ಆಯ್ಕೆ ಆಗಿದ್ದರು. ಆದರೆ, ಕಾರಣಾಂತರಗಳಿಂದ ಸಿನಿಮಾ ಕೆಲಸಗಳು ನಿಂತವು. ಈಗ ‘ಗ್ರಾಮಾಯಣ’ ಸಿನಿಮಾ (Gramayana Movie) ಮತ್ತೆ ಸೆಟ್ಟೇರಿದೆ. ಈ ಬಗ್ಗೆ ವಿನಯ್ ಮಾತನಾಡಿದ್ದಾರೆ. ‘ಸಿನಿಮಾ ನಿಲ್ಲೋಕೆ ನಾನು ಕಾರಣ ಆಗಿರಲಿಲ್ಲ. ಹೀಗಾಗಿ ನನಗೆ ಆ ಬಗ್ಗೆ ತಪ್ಪಿತಸ್ಥ ಭಾವನೆ ಇಲ್ಲ. ಆದರೆ, ಸಿನಿಮಾ ನಿಂತ ಬಗ್ಗೆ ಬೇಸರ ಇತ್ತು’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published on: Jun 09, 2023 08:04 AM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More