ಚಿಕ್ಕಪ್ಪ ಪುನೀತ್ ರಾಜ್​ಕುಮಾರ್ ಬಗ್ಗೆ ವಿನಯ್ ರಾಜ್​ಕುಮಾರ್ ಮಾತು

Updated on: Aug 25, 2024 | 4:05 PM

Vinay Rajkumar: ವಿನಯ್ ರಾಜ್​ಕುಮಾರ್ ನಟನೆಯ ‘ಪೆಪೆ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ನಟ ವಿನಯ್ ರಾಜ್​ಕುಮಾರ್, ದುನಿಯಾ ವಿಜಯ್ ಜೊತೆಗಿನ ಸಂವಾದದಲ್ಲಿ ನಟ ಪುನೀತ್ ರಾಜ್​ಕುಮಾರ್ ಅವರನ್ನು ನೆನಪು ಮಾಡಿಕೊಂಡಿದ್ದಾರೆ.

ವಿನಯ್ ರಾಜ್​ಕುಮಾರ್ ನಟನೆಯ ‘ಪೆಪೆ’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾದ ಪ್ರಚಾರದಲ್ಲಿ ವಿನಯ್ ಹಾಗೂ ಚಿತ್ರತಂಡ ನಿರತವಾಗಿದೆ. ‘ಭೀಮ’ ಸಿನಿಮಾದ ಗೆಲುವಿನ ಖುಷಿಯಲ್ಲಿರುವ ದುನಿಯಾ ವಿಜಯ್ ಸಹ ‘ಪೆಪೆ’ ಸಿನಿಮಾಕ್ಕೆ ಬೆಂಬಲ ನೀಡಿದ್ದು, ವಿನಯ್ ರಾಜ್​ಕುಮಾರ್ ಜೊತೆಗೆ ಕಾಡು-ಮೇಡು ಅಲೆದಾಡುತ್ತಾ ಕೆಲ ದೇವಾಲಯಗಳ ದರ್ಶನ ಮಾಡಿ, ಸಿನಿಮಾ ಬಗ್ಗೆ ಕುಟುಂಬದ ಬಗ್ಗೆ ಮುಂದಿನ ಯೋಜನೆಗಳ ಬಗ್ಗೆ ಮಾತನಾಡಿದ್ದಾರೆ. ದುನಿಯಾ ವಿಜಯ್ ಹಾಗೂ ವಿನಯ್ ರಾಜ್​ಕುಮಾರ್ ಜರ್ನಿ ಸಮಯದಲ್ಲಿ ವಿನಯ್ ರಾಜ್​ಕುಮಾರ್, ತಮ್ಮ ಚಿಕ್ಕಪ್ಪ, ದಿವಂಗತ ಪುನೀತ್ ರಾಜ್​ಕುಮಾರ್ ಬಗ್ಗೆ ಭಾವುಕರಾಗಿ ಮಾತನಾಡಿದ್ದಾರೆ. ಅಂದಹಾಗೆ ‘ಪೆಪೆ’ ಸಿನಿಮಾ ಆಗಸ್ಟ್ 30ರಂದು ಬಿಡುಗಡೆ ಆಗಲಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More