‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್

Updated on: Apr 28, 2026 | 10:55 PM

ವಿನೋದ್ ಪ್ರಭಾಕರ್ ನಟನೆಯ ‘ಬಲರಾಮನ ದಿನಗಳು’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಈ ಸಿನಿಮಾ ಬಗ್ಗೆ ವಿನೋದ್ ಪ್ರಭಾಕರ್ ಅವರಿಗೆ ತುಂಬ ಭರವಸೆ ಇದೆ. ಟೀಸರ್ ಬಿಡುಗಡೆ ಪ್ರಯುಕ್ತ ನಡೆದ ಸುದ್ದಿಗೋಷ್ಠಿಯಲ್ಲಿ ‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ವಿನೋದ್ ಪ್ರಭಾಕರ್ ಮಾತನಾಡಿದ ವಿಡಿಯೋ ಇಲ್ಲಿದೆ.

‘ಬಲರಾಮನ ದಿನಗಳು’ (Balaramana Dinagalu) ಸಿನಿಮಾದಲ್ಲಿ ನಟ ವಿನೋದ್ ಪ್ರಭಾಕರ್ ಅವರು ಮುಖ್ಯ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ವೇದಿಕೆ ಏರಿ ಮಾತನಾಡಿದರು. ಆದಷ್ಟು ಬೇಗ ಈ ಸಿನಿಮಾವನ್ನು ಬಿಡುಗಡೆ ಮಾಡಲು ತಯಾರಿ ನಡೆದಿದೆ. ‘ಸಿನಿಮಾ ಚೆನ್ನಾಗಿ ಇದ್ದರೆ ಜನರು ಖಂಡಿತಾ ನೋಡುತ್ತಾರೆ. ಅದಕ್ಕೆ ನನ್ನ ಮಾದೇವ ಸಿನಿಮಾ ಸಾಕ್ಷಿ. ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು. ಅದೇ ರೀತಿ ಬಲರಾಮನ ದಿನಗಳು ಸಿನಿಮಾ ಕೂಡ ಹಿಟ್ ಆಗುತ್ತದೆ. ದೊಡ್ಡ ಬಜೆಟ್​ನಲ್ಲಿ ಸಿನಿಮಾ ಸಿದ್ಧವಾಗಿದೆ. ಇಂಥ ಸಿನಿಮಾ ಮಾಡಿದ ನಿರ್ಮಾಪಕರಿಗೆ ನಾನು ಧನ್ಯವಾದ ಹೇಳುತ್ತೇನೆ. ಅವರಿಗೆ ಈ ಸಿನಿಮಾದಿಂದ ದುಪ್ಪಟ್ಟು ಹಣ ಬರುತ್ತದೆ’ ಎಂದು ವಿನೋದ್ ಪ್ರಭಾಕರ್ (Vinod Prabhakar) ಅವರು ಹೇಳಿದರು. ಸುದ್ದಿಗೋಷ್ಠಿಯಲ್ಲಿ ‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ವಿನೋದ್ ಪ್ರಭಾಕರ್ ಮಾತನಾಡಿದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More