ನಟಿ ಲೀಲಾವತಿಗೆ ತೀವ್ರ ಅನಾರೋಗ್ಯ: ಅಮ್ಮನ ಪರಿಸ್ಥಿತಿ ನೆನೆದು ಕಣ್ಣೀರು ಹಾಕಿದ ವಿನೋದ್ ರಾಜ್
ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಟಿ ಲೀಲಾವತಿ ಮತ್ತು ಅವರ ಪುತ್ರ ವಿನೋದ್ ರಾಜ್ ಅವರು ಪಶು ಆಸ್ಪತ್ರೆ ನಿರ್ಮಿಸಿದ್ದಾರೆ. ಸುಸಜ್ಜಿತವಾದ ಈ ಆಸ್ಪತ್ರೆಯ ಉದ್ಘಾಟನೆಗೂ ಮುನ್ನ ಮಾಧ್ಯಮಗಳ ಜೊತೆ ವಿನೋದ್ ರಾಜ್ ಮಾತನಾಡಿದ್ದಾರೆ. ತಾಯಿಯ ಆರೋಗ್ಯ ಕ್ಷೀಣಿಸಿರುವುದಕ್ಕೆ ಅವರು ಕಣ್ಣೀರು ಹಾಕಿದ್ದಾರೆ.
ಹಿರಿಯ ನಟಿ ಲೀಲಾವತಿ (Leelavathi) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ತಾವು ಕಟ್ಟಿಸಿದ ಪಶು ಆಸ್ಪತ್ರೆ (Veterinary Hospital) ಉದ್ಘಾಟನಾ ಸಮಾರಂಭದಲ್ಲಿ ಇಂದು (ನವೆಂಬರ್ 28) ಅವರು ಸಕ್ರಿಯವಾಗಿ ಭಾಗಿ ಆಗಬೇಕಿತ್ತು. ಅನಾರೋಗ್ಯದ ಕಾರಣದಿಂದ ಅವರಿಗೆ ಭಾಗಿಯಾಗಲು ಸಾಧ್ಯವಾಗಿಲ್ಲ. ಅಮ್ಮನ ಅನಾರೋಗ್ಯದ ಪರಿಸ್ಥಿತಿಯನ್ನು ವಿವರಿಸುತ್ತ ಪುತ್ರ ವಿನೋದ್ ರಾಜ್ (Vinod Raj) ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ಸಖತ್ ಭಾವುಕರಾಗಿದ್ದಾರೆ. ಲೀಲಾವತಿ ಅವರಿಗೆ ಪ್ರಾಣಿಗಳ ಮೇಲೆ ಸಖತ್ ಪ್ರೀತಿ. ಅದೇ ಕಾರಣಕ್ಕಾಗಿ ಅವರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಸುಮಾರು 45 ಲಕ್ಷ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆ ಕಟ್ಟಿದ್ದಾರೆ. ಈ ಆಸ್ಪತ್ರೆಯ ಉದ್ಘಾಟನೆಯಲ್ಲಿ ಶಿವರಾಜ್ಕುಮಾರ್, ಗೀತಾ ಶಿವರಾಜ್ಕುಮಾರ್ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.