ನಟಿ ಲೀಲಾವತಿಗೆ ತೀವ್ರ ಅನಾರೋಗ್ಯ: ಅಮ್ಮನ ಪರಿಸ್ಥಿತಿ ನೆನೆದು ಕಣ್ಣೀರು ಹಾಕಿದ ವಿನೋದ್​ ರಾಜ್​

Updated on: Nov 28, 2023 | 2:34 PM

ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಟಿ ಲೀಲಾವತಿ ಮತ್ತು ಅವರ ಪುತ್ರ ವಿನೋದ್​ ರಾಜ್​ ಅವರು ಪಶು ಆಸ್ಪತ್ರೆ ನಿರ್ಮಿಸಿದ್ದಾರೆ. ಸುಸಜ್ಜಿತವಾದ ಈ ಆಸ್ಪತ್ರೆಯ ಉದ್ಘಾಟನೆಗೂ ಮುನ್ನ ಮಾಧ್ಯಮಗಳ ಜೊತೆ ವಿನೋದ್ ರಾಜ್​ ಮಾತನಾಡಿದ್ದಾರೆ. ತಾಯಿಯ ಆರೋಗ್ಯ ಕ್ಷೀಣಿಸಿರುವುದಕ್ಕೆ ಅವರು ಕಣ್ಣೀರು ಹಾಕಿದ್ದಾರೆ.

ಹಿರಿಯ ನಟಿ ಲೀಲಾವತಿ (Leelavathi) ಅವರಿಗೆ ತೀವ್ರ ಅನಾರೋಗ್ಯ ಉಂಟಾಗಿದೆ. ತಾವು ಕಟ್ಟಿಸಿದ ಪಶು ಆಸ್ಪತ್ರೆ (Veterinary Hospital) ಉದ್ಘಾಟನಾ ಸಮಾರಂಭದಲ್ಲಿ ಇಂದು (ನವೆಂಬರ್​ 28) ಅವರು ಸಕ್ರಿಯವಾಗಿ ಭಾಗಿ ಆಗಬೇಕಿತ್ತು. ಅನಾರೋಗ್ಯದ ಕಾರಣದಿಂದ ಅವರಿಗೆ ಭಾಗಿಯಾಗಲು ಸಾಧ್ಯವಾಗಿಲ್ಲ. ಅಮ್ಮನ ಅನಾರೋಗ್ಯದ ಪರಿಸ್ಥಿತಿಯನ್ನು ವಿವರಿಸುತ್ತ ಪುತ್ರ ವಿನೋದ್​ ರಾಜ್​ (Vinod Raj) ಕಣ್ಣೀರು ಹಾಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡುವಾಗ ಅವರು ಸಖತ್​ ಭಾವುಕರಾಗಿದ್ದಾರೆ. ಲೀಲಾವತಿ ಅವರಿಗೆ ಪ್ರಾಣಿಗಳ ಮೇಲೆ ಸಖತ್​ ಪ್ರೀತಿ. ಅದೇ ಕಾರಣಕ್ಕಾಗಿ ಅವರು ನೆಲಮಂಗಲದ ಸೋಲದೇವನಹಳ್ಳಿಯಲ್ಲಿ ಸುಮಾರು 45 ಲಕ್ಷ ರೂಪಾಯಿ ವೆಚ್ಚದಲ್ಲಿ ಪಶು ಆಸ್ಪತ್ರೆ ಕಟ್ಟಿದ್ದಾರೆ. ಈ ಆಸ್ಪತ್ರೆಯ ಉದ್ಘಾಟನೆಯಲ್ಲಿ ಶಿವರಾಜ್​ಕುಮಾರ್​, ಗೀತಾ ಶಿವರಾಜ್​ಕುಮಾರ್​ ಸೇರಿದಂತೆ ಅನೇಕ ಸೆಲೆಬ್ರಿಟಿಗಳು ಪಾಲ್ಗೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಅವರು ಆಸ್ಪತ್ರೆ ಉದ್ಘಾಟನೆ ಮಾಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More