ವಿಡಿಯೋ: ರೇಣುಕಾ ಸ್ವಾಮಿ ಕುಟುಂಬದ ಭೇಟಿ ಬಳಿಕ ಭಾವುಕರಾದ ವಿನೋದ್ ರಾಜ್

Updated on: Jul 26, 2024 | 2:52 PM

ದರ್ಶನ್ ಮತ್ತು ಗ್ಯಾಂಗ್​ನಿಂದ ಹತ್ಯೆಗೆ ಒಳಗಾಗಿದ್ದಾರೆ ಎನ್ನಲಾಗಿರುವ ರೇಣುಕಾ ಸ್ವಾಮಿ ಕುಟುಂಬವನ್ನು ನಟ ವಿನೋದ್ ರಾಜ್ ಇಂದು (ಜುಲೈ 26) ಭೇಟಿ ಮಾಡಿದರು. ರೇಣುಕಾ ಸ್ವಾಮಿ ಕುಟುಂಬಕ್ಕೆ 1 ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದಾರೆ. ಭೇಟಿ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡುತ್ತಾ ವಿನೋದ್ ಭಾವುಕರಾದರು.

ಕೆಲವು ದಿನಗಳ ಹಿಂದಷ್ಟೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿ ದರ್ಶನ್ ಅನ್ನು ಭೇಟಿ ಮಾಡಿದ್ದ ನಟ ವಿನೋದ್ ರಾಜ್, ಇಂದು (ಜುಲೈ 26) ಚಿತ್ರದುರ್ಗಕ್ಕೆ ತೆರಳಿ ರೇಣುಕಾ ಸ್ವಾಮಿ ಕುಟುಂಬದವರನ್ನು ಭೇಟಿ ಆಗಿದ್ದಾರೆ. ರೇಣುಕಾ ಸ್ವಾಮಿ ಪೋಷಕರು ಹಾಗೂ ಪತ್ನಿಗೆ ಸಾಂತ್ವನ ಹೇಳಿದ ನಟ ವಿನೋದ್ ರಾಜ್, ಒಂದು ಲಕ್ಷ ರೂಪಾಯಿ ಹಣ ಸಹಾಯವನ್ನು ಸಹ ಮಾಡಿದ್ದಾರೆ. ಭೇಟಿಗೆ ಬಂದ ವಿನೋದ್ ರಾಜ್ ಎದುರು ರೇಣುಕಾ ಸ್ವಾಮಿಯ ಪತ್ನಿ ಮತ್ತು ತಾಯಿ ಕಣ್ಣೀರು ಹಾಕಿದ್ದಾರೆ. ರೇಣುಕಾ ಸ್ವಾಮಿ ಕುಟುಂಬವನ್ನು ಭೇಟಿಯಾದ ಬಳಿಕ ಮಾಧ್ಯಮಗಳೊಟ್ಟಿಗೆ ಮಾತನಾಡಿದ ನಟ ವಿನೋದ್ ರಾಜ್ ಸಹ ಭಾವುಕರಾದರು. ಇಲ್ಲಿದೆ ವಿಡಿಯೋ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 26, 2024 02:51 PM
Loading...
Unable to load recommendations.
Follow Us
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More