ಅಂಬೇಡ್ಕರ್ ಪ್ರತಿಮೆಯ ಸಂವಿಧಾನದ ಪ್ರತಿಕೃತಿಗೆ ಹಾನಿ; ಮಹಾರಾಷ್ಟ್ರದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ
ಮಂಗಳವಾರ ಅಪರಿಚಿತ ವ್ಯಕ್ತಿಯೊಬ್ಬರು ಪರ್ಭಾನಿ ರೈಲ್ವೆ ನಿಲ್ದಾಣದ ಹೊರಗೆ ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯ ಕೈಯಲ್ಲಿದ್ದ ಸಂವಿಧಾನದ ಪ್ರತಿಕೃತಿಯನ್ನು ಹಾನಿಗೊಳಿಸಿದ್ದರು. ಮಹಾರಾಷ್ಟ್ರದ ಪರ್ಭಾನಿಯಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಗೆ ಸಂಬಂಧಿಸಿದಂತೆ ಇಂದು ಭಾರೀ ಹಿಂಸಾಚಾರ ಭುಗಿಲೆದ್ದಿದೆ. ಹಿಂಸಾತ್ಮಕ ಪ್ರತಿಭಟನೆಯ ನಡುವೆ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಿದರು. ಗುಂಪನ್ನು ನಿಯಂತ್ರಿಸಲು ಅಶ್ರುವಾಯು ಶೆಲ್‌ಗಳನ್ನು ಹಾರಿಸಲಾಯಿತು.
ಮುಂಬೈ: ಮಹಾರಾಷ್ಟ್ರದ ಪರ್ಭಾನಿ ಜಿಲ್ಲೆಯಲ್ಲಿ ಮಂಗಳವಾರ ರೈಲ್ವೆ ನಿಲ್ದಾಣದ ಹೊರಗಿನ ಬಿಆರ್ ಅಂಬೇಡ್ಕರ್ ಪ್ರತಿಮೆ ಬಳಿ ವ್ಯಕ್ತಿಯೊಬ್ಬರು ಆ ಪ್ರತಿಮೆಯ ಕೈಯಲ್ಲಿದ್ದ ಸಂವಿಧಾನದ ಪ್ರತಿಕೃತಿಯನ್ನು ಧ್ವಂಸಗೊಳಿಸಿದ್ದರು. ಇದು ತೀವ್ರ ಹಿಂಸಾಚಾರಕ್ಕೆ ಕಾರಣವಾಗಿದೆ. ಈ ಘಟನೆಯ ಬಗ್ಗೆ ಸುದ್ದಿ ಹರಡಿದ ನಂತರ ಸುಮಾರು 200 ಜನರು ಪ್ರತಿಮೆ ಬಳಿ ಜಮಾಯಿಸಿ ಘೋಷಣೆಗಳನ್ನು ಕೂಗಿದರು. ಗುಂಪನ್ನು ಚದುರಿಸಲು ಪೊಲೀಸರು ಆಗಮಿಸುತ್ತಿದ್ದಂತೆ ಗೊಂದಲದ ಗೂಡಾಗಿ ಕಲ್ಲು ತೂರಾಟ ನಡೆಸಲಾಯಿತು. ಇದು ಶೀಘ್ರದಲ್ಲೇ ಹಿಂಸಾಚಾರವನ್ನು ಪ್ರಚೋದಿಸಿತು. ಜನರು ಪೊಲೀಸ್ ವಾಹನದ ಮೇಲೆ ಕಲ್ಲು ತೂರಾಟ ನಡೆಸಿ, ವಾಹನದ ಹಿಂದೆ ಓಡುತ್ತಿರುವ ವಿಡಿಯೋ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos