ಮಂಡ್ಯ ಗಣೇಶ ಮೆರವಣಿಗೆ ವೇಳೆ ಗಲಾಟೆ: ಸಚಿವ ಜಮೀರ್ ಹೇಳಿದ್ದೇನು?
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 150 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಈ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಜಮೀರ್ ಅಹ್ಮದ್ ಜಕಾರಣಿಗಳ ಹೇಳಿಕೆಯಿಂದಲೇ ಇಂತಹ ಘಟನೆ ಆಗುವುದು. ಈ ಘಟನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದಿದ್ದಾರೆ.
ಬೆಂಗಳೂರು, ಸೆಪ್ಟೆಂಬರ್ 12: ಮಂಡ್ಯ (Mandya) ನಾಗಮಂಗಲ ಘಟನೆ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದ ಸಚಿವ ಜಮೀರ್ ಅಹ್ಮದ್ ಖಾನ್ ಪ್ರತಿಕ್ರಿಯಿಸಿದ್ದು, ಆ ಘಟನೆ ಆಗಬಾರದಿತ್ತು. ರಾಜಕಾರಣಿಗಳ ಹೇಳಿಕೆಯಿಂದಲೇ ಇಂತಹ ಘಟನೆ ಆಗುವುದು. ಬಿಜೆಪಿ ಸರ್ಕಾರದಲ್ಲಿ ಇದ್ದಾಗ ಈ ರೀತಿ ಘಟನೆ ಆಗಿಲ್ಲವಾ ಎಂದು ಪ್ರಶ್ನಿಸಿದ್ದಾರೆ. ಈ ರೀತಿ ಘಟನೆ ವಿಷಾದನೀಯ. ಎಲ್ಲ ಧರ್ಮದವರಿಗೂ ತಮ್ಮದೇ ಆದ ಹಬ್ಬ ಇರುತ್ತೆ, ಆಚರಿಸುತ್ತಾರೆ. ಈ ಘಟನೆಯನ್ನು ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:35 pm, Thu, 12 September 24