Bomb Attack: ಮತದಾನದ ವೇಳೆ ಮುರ್ಷಿದಾಬಾದ್​ನಲ್ಲಿ ಬಾಂಬ್ ದಾಳಿ, ಹಲವರಿಗೆ ಗಾಯ

Updated on: Apr 23, 2026 | 10:45 AM

West Bengal Assembly Elections 2026: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಾಹಿನಾ ಮುಮ್ತಾಜ್ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯ ನಂತರ, ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಮುರ್ಷಿದಾಬಾದ್, ಏಪ್ರಿಲ್ 23: ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ನಡೆಯುತ್ತಿದೆ. ಕೆಲವು ದುಷ್ಕರ್ಮಿಗಳು ಮತದಾನದ ವೇಳೆ ಕಚ್ಚಾ ಬಾಂಬ್ ಎಸೆದ ಪರಿಣಾಮ ಹಲವು ಮಂದಿ ಗಾಯಗೊಂಡಿದ್ದಾರೆ. ನೌಡಾದಲ್ಲಿ ಈ ಘಟನೆ ನಡೆದಿದ್ದು, ಸ್ಥಳೀಯರಲ್ಲಿ ಭೀತಿ ಉಂಟಾಗಿದೆ. ಜಿಲ್ಲೆಯಲ್ಲಿ 24 ಗಂಟೆಗಳಿಗಿಂತ ಕಡಿಮೆ ಅವಧಿಯಲ್ಲಿ ನಡೆದ ಎರಡನೇ ದಾಳಿ ಇದಾಗಿದೆ. ನಿನ್ನೆ ರಾತ್ರಿ ಶಿವನಗರ ಪ್ರಾಥಮಿಕ ಶಾಲೆಯ ಬಳಿ ಕಚ್ಚಾ ಬಾಂಬ್‌ಗಳನ್ನು ಎಸೆಯಲಾಗಿದ್ದು, ಒಬ್ಬ ಮಹಿಳೆ ಗಾಯಗೊಂಡಿದ್ದರು. ಸಮೀಪದಲ್ಲಿದ್ದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ಸಾಹಿನಾ ಮುಮ್ತಾಜ್ ಖಾನ್ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆಯ ನಂತರ, ಮುರ್ಷಿದಾಬಾದ್ ಜಿಲ್ಲೆಯಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: Apr 23, 2026 10:44 AM
Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More