ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳ ಮಾರಾಮಾರಿ: ಕಲ್ಲಿನಿಂದ ಜಜ್ಜಿ ಹಲ್ಲೆ

Edited By:

Updated on: Jan 21, 2026 | 11:42 AM

ಬೆಳಗಾವಿ ಹಿಂಡಲಗಾ ಜೈಲಿನಲ್ಲಿ ಕೈದಿಗಳಾದ ಫಯಾನ್ ಮತ್ತು ಸುರೇಶ್ ನಡುವೆ ಎಸ್‌ಟಿಡಿ ಫೋನ್ ಕಾಲ್ ವಿಚಾರಕ್ಕೆ ಮಾರಾಮಾರಿ ನಡೆದಿದೆ. ಅತ್ಯಾಚಾರ ಪ್ರಕರಣದ ಆರೋಪಿ ಫಯಾನ್, ಮತ್ತೊಬ್ಬ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಪರಿಣಾಮ ಸುರೇಶ್ ಗಾಯಗೊಂಡಿದ್ದು, ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳಗಾವಿ, ಜನವರಿ 21: ಬೆಳಗಾವಿ ಜಿಲ್ಲೆಯ ಹಿಂಡಲಗಾ ಜೈಲಿನಲ್ಲಿ ಕೈದಿಗಳ ನಡುವೆ ಮಾರಾಮಾರಿ ನಡೆದಿದ್ದು, ಓರ್ವ ಕೈದಿ ಗಾಯಗೊಂಡಿದ್ದಾನೆ. ಎಸ್‌ಟಿಡಿ ಫೋನ್ ಕಾಲ್ ವಿಚಾರವಾಗಿ ಕೈದಿಗಳ ಮಧ್ಯೆ ಘರ್ಷಣೆ ಶುರುವಾಗಿದೆ. ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಮಂಗಳೂರು ಮೂಲದ ಫಯಾನ್, ಬೆಳಗಾವಿ ಮೂಲದ ಮತ್ತೊಬ್ಬ ಅತ್ಯಾಚಾರ ಆರೋಪಿ ಸುರೇಶ್ ಮೇಲೆ ಕಲ್ಲಿನಿಂದ ಜಜ್ಜಿ ಹಲ್ಲೆ ಮಾಡಿದ್ದಾನೆ. ಗಾಯಾಳು ಸುರೇಶ್​​ನನ್ನು ಚಿಕಿತ್ಸೆಗಾಗಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ