AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕೂದಲೆಳೆ ಅಂತರದಲ್ಲಿ ತಪ್ಪಿದ ಅಪಘಾತ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Video: ಕೂದಲೆಳೆ ಅಂತರದಲ್ಲಿ ತಪ್ಪಿದ ಅಪಘಾತ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಅಕ್ಷತಾ ವರ್ಕಾಡಿ
|

Updated on:May 27, 2026 | 11:29 AM

Share

ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಯು ಮುಂಜಾನೆ ಸಂಭವಿಸಿದ ಭೀಕರ ಘಟನೆಯನ್ನು ತೋರಿಸುತ್ತದೆ. ರಸ್ತೆ ಬದಿಯಲ್ಲಿದ್ದ ಪಾದಚಾರಿಗಳ ಮೇಲೆ ವೇಗವಾಗಿ ಬಂದ ಬಸ್ ನುಗ್ಗುವಂತೆ ಬಂದು, ಚಾಲಕನ ಅದ್ಭುತ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಭೀಕರ ಅಪಘಾತ ತಪ್ಪಿದೆ. ಪ್ರಾಣಾಪಾಯದಿಂದ ಪಾರಾದ ಪಾದಚಾರಿಗಳ ಈ ಘಟನೆ ಕುತೂಹಲ ಮೂಡಿಸಿದೆ.

ಕೇರಳ: ಸಾಮಾಜಿಕ ಜಾಲತಾಣಗಳಲ್ಲಿ ಸದ್ಯ ಭಾರೀ ವೈರಲ್ ಆಗುತ್ತಿರುವ ಈ ಸಿಸಿಟಿವಿ ದೃಶ್ಯಾವಳಿಯು, ಮುಂಜಾನೆ ಸುಮಾರು 6:15ರ ವೇಳೆಗೆ ರಸ್ತೆ ಬದಿಯಲ್ಲಿದ್ದ ಪಾದಚಾರಿಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಭೀಕರ ಘಟನೆಯನ್ನು ತೋರಿಸುತ್ತದೆ. ವಿಡಿಯೋದಲ್ಲಿ, ಎಂದಿನಂತೆ ಕಚೇರಿಗೆ ಹೊರಟ ವ್ಯಕ್ತಿಯೊಬ್ಬರು ಹಾಗೂ ಇಬ್ಬರು ಪಾದಚಾರಿಗಳು ರಸ್ತೆ ಬದಿಯಲ್ಲಿ ನಿಂತಿರುವುದನ್ನು ಕಾಣಬಹುದು. ಅಷ್ಟರಲ್ಲೇ ಅತ್ಯಂತ ವೇಗವಾಗಿ ಬಂದ ಹಳದಿ ಮತ್ತು ನೀಲಿ ಬಣ್ಣದ ಖಾಸಗಿ ಬಸ್, ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಿದ್ದ ಜನರ ಮೇಲೆಯೇ ನುಗ್ಗುವಂತೆ ಆತಂಕ ಸೃಷ್ಟಿಸಿದೆ. ಆದರೆ, ಇನ್ನೇನು ಪಾದಚಾರಿಗಳಿಗೆ ಡಿಕ್ಕಿ ಹೊಡೆಯಬೇಕೆನ್ನುವಷ್ಟರಲ್ಲಿ ಚಾಲಕ ತೋರಿದ ಅದ್ಭುತ ಸಮಯಪ್ರಜ್ಞೆಯಿಂದ ಭೀಕರ ಅಪಘಾತ ತಪ್ಪಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published on: May 27, 2026 11:28 AM
Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More