ಸಿಗರೇಟ್ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ
ಸಿಗರೇಟ್ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಈ ಕೃತ್ಯ ಸಂಪೂರ್ಣವಾಗಿ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ವೃದ್ಧೆಯ ಅಸಹಾಯಕತೆ ಮನ ಕಲುಕುವಂತಿದೆ. ಇಂತಹ ಕಳ್ಳತನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಸುರಕ್ಷತೆಯ ಬಗ್ಗೆ ಜಾಗೃತಿ ಅಗತ್ಯ.
ಸಿಗರೇಟ್ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸರ ಕಿತ್ತು ಕಳ್ಳ ಓಡಿ ಹೋಗಿರುವುದು, ವೃದ್ಧೆ ಅಸಹಾಯಕತೆಯಿಂದ ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

