ಸಿಗರೇಟ್​​ ಖರೀದಿಸುವ ನೆಪದಲ್ಲಿ ಬಂದು ವೃದ್ಧೆಯ ಸರ ಕಿತ್ತೊಯ್ದ ಕಳ್ಳ; ಸಿಸಿಟಿವಿಯಲ್ಲಿ ಸೆರೆ

Updated on: Feb 18, 2026 | 3:00 PM

ಸಿಗರೇಟ್ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಈ ಕೃತ್ಯ ಸಂಪೂರ್ಣವಾಗಿ ಅಂಗಡಿಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ವೃದ್ಧೆಯ ಅಸಹಾಯಕತೆ ಮನ ಕಲುಕುವಂತಿದೆ. ಇಂತಹ ಕಳ್ಳತನ ಪ್ರಕರಣಗಳು ಸಾರ್ವಜನಿಕರಲ್ಲಿ ಆತಂಕ ಮೂಡಿಸಿವೆ. ಸುರಕ್ಷತೆಯ ಬಗ್ಗೆ ಜಾಗೃತಿ ಅಗತ್ಯ.

ಸಿಗರೇಟ್​​ ಖರೀದಿಸುವ ನೆಪದಲ್ಲಿ ಅಂಗಡಿಗೆ ಬಂದ ಕಳ್ಳನೊಬ್ಬ ವೃದ್ಧೆಯ ಸರ ಕಿತ್ತೊಯ್ದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಅಂಗಡಿಯಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಸರ ಕಿತ್ತು ಕಳ್ಳ ಓಡಿ ಹೋಗಿರುವುದು, ವೃದ್ಧೆ ಅಸಹಾಯಕತೆಯಿಂದ ಕಿರುಚಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More