ವೇಗವಾಗಿ ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಹೊರಗೆಸೆಯಲ್ಪಟ್ಟ ವಿದ್ಯಾರ್ಥಿನಿಯರು! ಭೀಕರ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

Edited By:

Updated on: Mar 31, 2026 | 1:32 PM

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನ ಬಾಗಿಲು ತೆರೆದುಕೊಂಡು ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಬಿದ್ದ ಘಟನೆ ನಡೆದಿದೆ. ಪುತ್ತೂರಿನಿಂದ ಧರ್ಮಸ್ಥಳಕ್ಕೆ ಹೋಗುತ್ತಿದ್ದ ಬಸ್‌ನಲ್ಲಿ ಈ ಅವಘಡ ಸಂಭವಿಸಿದ್ದು, ಅಕ್ಕ-ತಂಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸದ್ಯ ವೈರಲ್ ಆಗುತ್ತಿದೆ.

ಮಂಗಳೂರು, ಮಾರ್ಚ್ 31: ವೇಗವಾಗಿ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ (KSRTC) ಬಸ್‌ನ ಬಾಗಿಲು ಏಕಾಏಕಿ ತೆರೆದುಕೊಂಡ ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ರಸ್ತೆಗೆ ಎಸೆಯಲ್ಪಟ್ಟ ಭೀಕರ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದಲ್ಲಿ ನಡೆದಿದೆ. ಅದೃಷ್ಟವಶಾತ್ ಇಬ್ಬರು ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಘಟನೆಯ ವಿವರ: ಪುತ್ತೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸಿಗೆ ಗೇರುಕಟ್ಟೆ ಎಂಬಲ್ಲಿ ಅಕ್ಕ-ತಂಗಿ ಹತ್ತಿದ್ದರು. ಬಸ್ ಕಳಿಯ ಗ್ರಾಮದ ರೇಷ್ಮೆರೋಡ್ ಎಂಬಲ್ಲಿನ ತಿರುವಿನಲ್ಲಿ ವೇಗವಾಗಿ ಚಲಿಸುತ್ತಿದ್ದಾಗ, ಬಸ್ಸಿನ ಬಾಗಿಲು ಏಕಾಏಕಿ ತೆರೆದುಕೊಂಡಿದೆ. ಈ ವೇಳೆ ಬಾಗಿಲ ಬಳಿಯೇ ನಿಂತಿದ್ದ ಅಕ್ಕ ಮೊದಲು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಅವರನ್ನು ರಕ್ಷಿಸಲು ಹೋದ ತಂಗಿ ಕೂಡ ನಿಯಂತ್ರಣ ತಪ್ಪಿ ಬಸ್ಸಿನಿಂದ ಹೊರಕ್ಕೆ ಬಿದ್ದಿದ್ದಾರೆ.

ಈ ಇಡೀ ದೃಶ್ಯವು ರಸ್ತೆಯ ಪಕ್ಕದಲ್ಲಿದ್ದ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ನೋಡುವವರ ಎದೆ ನಡುಗಿಸುವಂತಿದೆ. ಬಿದ್ದ ತಕ್ಷಣ ಸ್ಥಳೀಯರು ಓಡಿ ಬಂದು ವಿದ್ಯಾರ್ಥಿನಿಯರನ್ನು ರಕ್ಷಿಸಿ, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸ್ಸಿನ ನಿರ್ವಹಣೆ ಮತ್ತು ಚಾಲಕನ ನಿರ್ಲಕ್ಷ್ಯದ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More