Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ
ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದ್ದಾನೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ಘಟನೆ ರಸ್ತೆ ಸುರಕ್ಷತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅಜಾಗರೂಕ ಚಾಲನೆಯ ಅಪಾಯಗಳ ಬಗ್ಗೆ ಈ ಘಟನೆ ಎಚ್ಚರಿಕೆ ನೀಡುತ್ತದೆ.
ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

