Video: ಓವರ್ ಟೇಕ್ ಮಾಡೋಕೆ ಹೋಗಿ ಆಗಿದ್ದೇನು ನೋಡಿ; ಭೀಕರ ಅಪಘಾತದ ಸಿಸಿಟಿವಿ ದೃಶ್ಯ

Updated on: Jan 18, 2026 | 2:44 PM

ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿದ್ದಾನೆ. ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿರುವ ಈ ಘಟನೆ ರಸ್ತೆ ಸುರಕ್ಷತೆಯ ಮಹತ್ವವನ್ನು ಎತ್ತಿ ತೋರಿಸುತ್ತದೆ. ಅಜಾಗರೂಕ ಚಾಲನೆಯ ಅಪಾಯಗಳ ಬಗ್ಗೆ ಈ ಘಟನೆ ಎಚ್ಚರಿಕೆ ನೀಡುತ್ತದೆ.

ಕೇರಳದ ಎರ್ನಾಕುಲಂನಲ್ಲಿ ನಡೆದ ಭೀಕರ ಬೈಕ್ ಅಪಘಾತದ ದೃಶ್ಯಾವಳಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸವಾರನೊಬ್ಬ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿರುವುದು ಕಂಡುಬಂದಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವ್ಯಾಪಕವಾಗಿ ಹರಿದಾಡುತ್ತಿದೆ. @kothamangalam__varthakal ಎಂಬ ಇನ್ಸ್ಟಾಗ್ರಾಮ್​ ಖಾತೆಯಲ್ಲಿ ವಿಡಿಯೋ ಹಂಚಿಕೊಂಡಿರುವ ಈ ವಿಡಿಯೋ ಕೆಲವೇ ಗಂಟೆಗಳಲ್ಲಿ 5ಲಕ್ಷಕ್ಕೂ ಅಧಿಕ ವೀಕ್ಷಣೆಯನ್ನು ಪಡೆದುಕೊಂಡಿದೆ.

Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More