ಹುಚ್ಚಾಟ ಅತಿಯಾದ್ರೆ ಪ್ರಾಣವೇ ಹೋಗುವುದು: ಮಾಲ್​​ನ ರೇಲಿಂಗ್ ಬಳಿ ತಮಾಷೆ ಮಾಡಲು ಹೋಗಿ ಕೆಳಗೆ ಬಿದ್ದ ಯುವಕರು

Updated on: Mar 06, 2026 | 5:14 PM

ಶಾಪಿಂಗ್ ಮಾಲ್‌ನ ಕಾರಿಡಾರ್‌ನಲ್ಲಿ ಮೋಜು ಮಾಡುತ್ತಿದ್ದ ಇಬ್ಬರು ಸ್ನೇಹಿತರು ದುರಂತಕ್ಕೆ ಬಲಿಯಾಗಿದ್ದಾರೆ. ಒಬ್ಬರು ಇನ್ನೊಬ್ಬರ ಹೆಗಲ ಮೇಲೆ ಕುಳಿತು ಆಡುವಾಗ, ರೇಲಿಂಗ್‌ನಿಂದ ಆಯತಪ್ಪಿ ಕೆಳಗೆ ಬಿದ್ದಿದ್ದಾರೆ. ಅವರನ್ನು ಹಿಡಿಯಲು ಹೋದ ಸ್ನೇಹಿತನೂ ನಿಯಂತ್ರಣ ಕಳೆದುಕೊಂಡು ಬಿದ್ದು, ಇಬ್ಬರೂ ಪ್ರಾಣ ಕಳೆದುಕೊಂಡಿದ್ದಾರೆ. ಈ ಭೀಕರ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಮಾಲ್ ಸುರಕ್ಷತೆ ಬಗ್ಗೆ ಪ್ರಶ್ನೆ ಮೂಡಿಸಿದೆ.

ಶಾಪಿಂಗ್ ಮಾಲ್‌ನ ಕಾರಿಡಾರ್‌ನಲ್ಲಿ ಮೋಜು ಮಾಡಲು ಹೋಗಿ ಇಬ್ಬರು ಸ್ನೇಹಿತರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವ ದಾರುಣ ಘಟನೆ ನಡೆದಿದೆ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿವೆ. ವೈರಲ್ ವಿಡಿಯೋದ ಪ್ರಕಾರ, ಇಬ್ಬರು ಸ್ನೇಹಿತರು ಮಾಲ್‌ನ ಮೇಲಿನ ಅಂತಸ್ತಿನ ಕಾರಿಡಾರ್‌ನಲ್ಲಿ ನಡೆದು ಹೋಗುತ್ತಿರುತ್ತಾರೆ. ಈ ವೇಳೆ ಒಬ್ಬ ಸ್ನೇಹಿತ ಮತ್ತೊಬ್ಬನ ಹೆಗಲ ಮೇಲೆ ಹತ್ತಿ ಕುಳಿತುಕೊಳ್ಳುತ್ತಾನೆ. ಈ ರೀತಿ ಮೋಜು ಮಾಡುತ್ತಾ ಸಾಗುವಾಗ, ಕಾರಿಡಾರ್‌ನ ರೇಲಿಂಗ್ (Railing) ಬಳಿ ಹೋದಾಗ ಮೇಲೆ ಕುಳಿತಿದ್ದ ವ್ಯಕ್ತಿ ಆಯತಪ್ಪಿ ರೇಲಿಂಗ್ ಮೇಲೆ ಬೀಳುತ್ತಾನೆ. ಅವನನ್ನು ಹಿಡಿಯಲು ಹೋದ ಕೆಳಗಿದ್ದ ಸ್ನೇಹಿತನೂ ನಿಯಂತ್ರಣ ಕಳೆದುಕೊಂಡು, ಇಬ್ಬರೂ ರೇಲಿಂಗ್‌ನಿಂದ ನೇರವಾಗಿ ಮಾಲ್‌ನ ನೆಲ ಅಂತಸ್ತಿಗೆ ಬಿದ್ದಿದ್ದಾರೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More