Video: ಏಕಾಏಕಿ ಮಾಲಕಿಯ ಮೇಲೆ ಸಾಕು ಬೆಕ್ಕು ದಾಳಿ; ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆ

Updated on: Apr 11, 2026 | 5:57 PM

ಮನೆಯಲ್ಲಿ ಬೆಳೆದ ಮುದ್ದಾದ ಸಾಕು ಬೆಕ್ಕು ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿ, ರಕ್ತಸಿಕ್ತ ಗಾಯಗೊಳಿಸಿದ ವಿಡಿಯೋ ವೈರಲ್ ಆಗಿದೆ. ಮಾಲೀಕಿ ಹೇಗೋ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆ, ಅತ್ಯಂತ ಶಾಂತ ಪ್ರಾಣಿಗಳು ಕೂಡ ಕೆಲವೊಮ್ಮೆ ಆಕ್ರಮಣಕಾರಿ ವರ್ತನೆ ತೋರಬಹುದು ಎಂಬ ಗಂಭೀರ ಚರ್ಚೆಗೆ ಗ್ರಾಸವಾಗಿದೆ. ಸಾಕುಪ್ರಾಣಿಗಳ ಇಂತಹ ಅನಿರೀಕ್ಷಿತ ಆಕ್ರಮಣಕ್ಕೆ ಕಾರಣಗಳೇನು ಮತ್ತು ಇದನ್ನು ತಡೆಗಟ್ಟುವುದು ಹೇಗೆ ಎಂಬುದನ್ನು ಲೇಖನದಲ್ಲಿ ವಿವರಿಸಲಾಗಿದೆ.

ಮನೆಯಲ್ಲೇ ಮುದ್ದಾಗಿ ಬೆಳೆದ ಸಾಕು ಬೆಕ್ಕೊಂದು ತನ್ನ ಮಾಲೀಕಿಯ ಮೇಲೆ ಅನಿರೀಕ್ಷಿತವಾಗಿ ಭೀಕರ ದಾಳಿ ನಡೆಸಿರುವ ವಿಡಿಯೋ ಸೋಶಿಯಲ್​ ಮೀಡಿಯಾಗಳಲ್ಲಿ ವೈರಲ್​ ಆಗಿದೆ. ಬೆಕ್ಕು ಮಹಿಳೆಯ ಕೈಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ಬಲವಾಗಿ ಕಚ್ಚಿ ಗಾಯಗೊಳಿಸಿದ್ದು, ದಾಳಿಯ ತೀವ್ರತೆಗೆ ಕೊಠಡಿಯ ನೆಲದ ಮೇಲೆ ರಕ್ತ ಚೆಲ್ಲಿರುವುದು ವಿಡಿಯೋದಲ್ಲಿ ಸೆರೆಯಾಗಿದೆ. ಕೆಲ ನಿಮಿಷಗಳ ಕಾಲ ಬೆಕ್ಕಿನ ಹಿಡಿತದಿಂದ ತಪ್ಪಿಸಿಕೊಳ್ಳಲು ಹರಸಾಹಸ ಪಟ್ಟ ಮಹಿಳೆ, ಕೊನೆಯಲ್ಲಿ ಹೇಗೋ ಕೊಠಡಿಯಿಂದ ಹೊರಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಲಕ್ಷಾಂತರ ವೀಕ್ಷಣೆ ಪಡೆದಿರುವ ಈ ವಿಡಿಯೋ ಕಂಡು ನೆಟ್ಟಿಗರು ಬೆಚ್ಚಿಬಿದ್ದಿದ್ದು, ಅತ್ಯಂತ ಶಾಂತ ಸ್ವಭಾವದ ಪ್ರಾಣಿಗಳೂ ಕೂಡ ಕೆಲವು ಸಂದರ್ಭಗಳಲ್ಲಿ ಹೀಗೆ ವಿಪರೀತ ಆಕ್ರಮಣಕಾರಿಯಾಗಿ ವರ್ತಿಸಬಹುದು ಎಂಬ ಸತ್ಯ ಈಗ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ: ಕೆಲಸಕ್ಕೆ ಸೇರಿದ ಮೊದಲ ದಿನವೇ ವೈದ್ಯೆ ರಾಜೀನಾಮೆ; ವೈದ್ಯಕೀಯ ಲೋಕದ ಕರಾಳ ಮುಖ ಅನಾವರಣ!

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published on: Apr 11, 2026 05:56 PM
Loading...
Unable to load recommendations.
Follow Us
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More