AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು

Viral Video: ಬ್ಯಾಡ್ಮಿಂಟನ್ ಆಡುವಾಗಲೇ ಹೃದಯಾಘಾತದಿಂದ 25 ವರ್ಷದ ಯುವಕ ಸಾವು

ಸುಷ್ಮಾ ಚಕ್ರೆ
|

Updated on: Jul 28, 2025 | 9:18 PM

Share

ಹೈದರಾಬಾದ್‌ನ ನಾಗೋಲೆ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ 25 ವರ್ಷದ ಗುಂಡ್ಲಾ ರಾಕೇಶ್ ಎಂಬ ಯುವಕ ಶಂಕಿತ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಪಂದ್ಯದ ಸಮಯದಲ್ಲಿ ಅವರು ಹಠಾತ್ತನೆ ಕುಸಿದು ಬಿದ್ದಿರುವುದನ್ನು ಸಿಸಿಟಿವಿ ದೃಶ್ಯಗಳಲ್ಲಿ ಕಾಣಬಹುದು. ಸಹ ಆಟಗಾರರು ತಕ್ಷಣ ಸಿಪಿಆರ್ ಮಾಡಲು ಪ್ರಯತ್ನಿಸಿದರೂ, ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು.

ಹೈದರಾಬಾದ್, ಜುಲೈ 28: ಭಾನುವಾರ ಸಂಜೆ ಹೈದರಾಬಾದ್‌ನ ನಾಗೋಲೆ ಕ್ರೀಡಾಂಗಣದಲ್ಲಿ ಬ್ಯಾಡ್ಮಿಂಟನ್ ಆಡುವಾಗ 25 ವರ್ಷದ ಯುವಕ ಹೃದಯಾಘಾತದಿಂದ (Heart Attack) ಕುಸಿದುಬಿದ್ದು ಸಾವನ್ನಪ್ಪಿದ ಆಘಾತಕಾರಿ ದುರಂತ (Shocking News) ಸಂಭವಿಸಿದೆ. ಗುಂಡ್ಲಾ ರಾಕೇಶ್ ಎಂಬ ವ್ಯಕ್ತಿ ಆಟದ ಮಧ್ಯದಲ್ಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಅಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು. ಹೈದರಾಬಾದ್‌ನ ಖಾಸಗಿ ಸಂಸ್ಥೆಯ ಉದ್ಯೋಗಿ ರಾಕೇಶ್, ಖಮ್ಮಮ್ ಜಿಲ್ಲೆಯ ತಲ್ಲಡದ ಮಾಜಿ ಉಪ ಸರಪಂಚ ಗುಂಡ್ಲಾ ವೆಂಕಟೇಶ್ವರಲು ಅವರ ಪುತ್ರ. ಈ ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ರಾಕೇಶ್ ರಾತ್ರಿ 8ರ ಸುಮಾರಿಗೆ ಡಬಲ್ಸ್ ಪಂದ್ಯದಲ್ಲಿ ತೊಡಗಿರುವುದನ್ನು ತೋರಿಸುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ