AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್

Video: ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಇಲ್ಲಿದೆ ಟಿಪ್ಸ್

ಅಕ್ಷತಾ ವರ್ಕಾಡಿ
|

Updated on:Jun 07, 2025 | 12:37 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ 2025ರ ಗೆಲುವಿನ ನಂತರ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಭೀಕರ ಕಾಲ್ತುಳಿತ ಸಂಭವಿಸಿ 11 ಜನರು ಮೃತಪಟ್ಟಿದ್ದಾರೆ. ಈ ದುರಂತದ ನಂತರ, ಕಾಲ್ತುಳಿತದಿಂದ ಪಾರಾಗುವುದು ಹೇಗೆ ಎಂಬುದನ್ನು ವಿವರಿಸುವ ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಮತ್ತು ತುರ್ತು ಸಂದರ್ಭಗಳಲ್ಲಿ ಹೇಗೆ ಪ್ರತಿಕ್ರಿಯಿಸಬೇಕು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಐಪಿಎಲ್ 2025 ರ ಫೈನಲ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿತ್ತು. ಆದರೆ ಮರುದಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಅದೊಂದು ದುರಂತ ಇಡೀ ಆರ್​ಸಿಬಿ ತಂಡವನ್ನು ಹಾಗೂ ಅದರ ಅಭಿಮಾನಿಗಳನ್ನು ನೋವಿನ ಸಾಗರದಲ್ಲಿ ಮುಳುಗಿಸಿದೆ. ಆರ್​ಸಿಬಿ ತಂಡದ ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಿಂದ 11 ಅಮಾಯಕರು ಸಾವನ್ನಪ್ಪಿದ್ದು, ಈ ದುರಂತ ರಾಜ್ಯಾದ್ಯಂತ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ಇದೀಗ ವಿಡಿಯೋವೊಂದು ಸೋಶಿಯಲ್​​ ಮೀಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಕಾಲ್ತುಳಿತ ಸಂಭವಿಸಿದಾಗ ಬಚಾವಾಗೋದು ಹೇಗೆ, ಏನು ಮಾಡಬೇಕು? ಎಂಬುದನ್ನು ವಿಡಿಯೋದಲ್ಲಿ ವಿವರಿಸಲಾಗಿದೆ. ಏಕಾಏಕಿ ಒಂದೇ ಬಾರಿ ನಿಮ್ಮ ಮೇಲೆ ಹತ್ತಾರು ಜನರು ಬಿದ್ದರೆ ಅಥವಾ ನಿಮ್ಮನ್ನು ತುಳಿದುಕೊಂಡು ಹೋದರೆ ತಕ್ಷಣ ಪಾರಾಗಲು ಏನು ಮಾಡಬೇಕು ಎಂಬುದನ್ನು ಈ ವಿಡಿಯೋದಲ್ಲಿ ವಿವರಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವಿಡಿಯೋ ನೋಡಿ.

 

ಇದನ್ನೂ ಓದಿ:  ಪತ್ನಿಯನ್ನು ಕೊಂದು, ಮೃತದೇಹದೊಂದಿಗೆ ಸೆಲ್ಫಿ ತೆಗೆದು ಸಂಬಂಧಿಕರಿಗೆ ಕಳುಹಿಸಿ, ಆತ್ಮಹತ್ಯೆ ಮಾಡಿಕೊಂಡ ಪತಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 07, 2025 12:36 PM