AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಯಚೂರಿನಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ದಿಗಿಲು ಹುಟ್ಟಿಸುವ ದೃಶ್ಯ!

ರಾಯಚೂರಿನಲ್ಲಿ ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ; ದಿಗಿಲು ಹುಟ್ಟಿಸುವ ದೃಶ್ಯ!

ಅಕ್ಷಯ್​ ಪಲ್ಲಮಜಲು​​
|

Updated on: Mar 18, 2026 | 9:39 AM

Share

ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾರಿಗೂ ಅಪಾಯವಾಗಿಲ್ಲ. ಈ ದೃಶ್ಯದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಪ್ರಕೃತಿಯ ಶಕ್ತಿಯನ್ನು ಪ್ರದರ್ಶಿಸಿದೆ.

ರಾಯಚೂರು, ಮಾ.18: ಜಿಲ್ಲೆಯ ಅರಕೇರಾ ತಾಲ್ಲೂಕಿನ ಹಾಳಜಾಡಲದಿನ್ನಿ ಗ್ರಾಮದಲ್ಲಿ ಸಿಡಿಲು ಬಡಿದು ತೆಂಗಿನ ಮರವೊಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಗುಡುಗು ಸಹಿತ ಮಳೆಯ ಸಂದರ್ಭದಲ್ಲಿ ಸಂಭವಿಸಿದ ಈ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೈತ ಶರೀಫ್ ಸಾಬ್ ಎಂಬುವರಿಗೆ ಸೇರಿದ ಜಮೀನಿನಲ್ಲಿ ಈ ಘಟನೆ ಸಂಭವಿಸಿದೆ. ನಿನ್ನೆ ರಾತ್ರಿ ಜಿಲ್ಲೆಯಾದ್ಯಂತ ಗುಡುಗು ಮತ್ತು ಸಿಡಿಲು ಸಹಿತ ಮಳೆಯಾಗುತ್ತಿತ್ತು. ಈ ವೇಳೆ ಜಮೀನಿನಲ್ಲಿದ್ದ ಎತ್ತರದ ತೆಂಗಿನ ಮರಕ್ಕೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲು ಬಡಿದ ತೀವ್ರತೆಗೆ ಮರಕ್ಕೆ ತಕ್ಷಣ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರ ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ಅದೃಷ್ಟವಶಾತ್ ಘಟನೆಯ ವೇಳೆ ಮರದ ಹತ್ತಿರ ಯಾರೂ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ಸದ್ಯ ತೆಂಗಿನ ಮರವು ಬೆಂಕಿಯ ಕೆನ್ನಾಲಿಗೆಗೆ ಆಹುತಿಯಾಗುತ್ತಿರುವ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದು, ಇದು ಇಂಟರ್ನೆಟ್‌ನಲ್ಲಿ ಭಾರಿ ಸದ್ದು ಮಾಡುತ್ತಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More