ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಪುಟ್ಟ ಬಾಲಕಿ; ವೈರಲ್ ವಿಡಿಯೋಗೆ ಭಾರೀ ವಿರೋಧ

Updated on: Oct 24, 2024 | 2:45 PM

ಪುಟ್ಟ ಹುಡುಗಿಯೊಬ್ಬಳು ತನ್ನ ತಂದೆಯೊಂದಿಗೆ ಸ್ಕೂಟರ್ ಓಡಿಸುತ್ತಿರುವ ವಿಡಿಯೋ ಇಂಟರ್ನೆಟ್​ನಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಚಿಕ್ಕ ಬಾಲಕಿಗೆ ಸ್ಕೂಟಿ ಓಡಿಸಲು ಅವಕಾಶ ನೀಡಿರುವುದಕ್ಕೆ ಜನರು ಅಸಮಾಧಾನ ಹೊರಹಾಕಿದ್ದಾರೆ.

ಯೂನಿಫಾರಂ ಧರಿಸಿದ ಬಾಲಕಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿರುವುದನ್ನು ತೋರಿಸುವ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ರಸ್ತೆ ಸುರಕ್ಷತೆ ಮತ್ತು ಪೋಷಕರ ಜವಾಬ್ದಾರಿ ಕುರಿತು ಚರ್ಚೆಗೆ ಗ್ರಾಸವಾಗಿದೆ. ಈ ಚಿಕ್ಕ ವಿಡಿಯೋದಲ್ಲಿ ಈ ಹುಡುಗಿ ಸ್ಕೂಟಿಯನ್ನು ಟ್ರಾಫಿಕ್​ ಇರುವ ರಸ್ತೆಯಲ್ಲಿ ಆತ್ಮವಿಶ್ವಾಸದಿಂದ ಚಲಾಯಿಸುತ್ತಿರುವುದನ್ನು ಕಾಣಬಹುದು. ಆ ಬಾಲಕಿ ಮಾತ್ರವಲ್ಲದೆ ಹಿಂದೆ ಕುಳಿತಿರುವ ವ್ಯಕ್ತಿ ಕೂಡ ಹೆಲ್ಮೆಟ್ ಧರಿಸಿಲ್ಲ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಸುಷ್ಮಾ ಚಕ್ರೆ ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವರು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ ಹೊಂದಿದ್ದಾರೆ.

Read More