ಹಾಡಹಗಲೇ ಮೆಡಿಕಲ್ ಶಾಪ್‌ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ಶಾಕಿಂಗ್ ವಿಡಿಯೋ ವೈರಲ್
ಪಂಜಾಬ್‌ನ ಮೊಗಾದಲ್ಲಿ ಮೆಡಿಕಲ್ ಶಾಪ್ ಮಾಲೀಕನನ್ನು ಬರ್ಬರವಾಗಿ ಥಳಿಸಿ, ದರೋಡೆ ಮಾಡಲಾಗಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಚಂಡೀಗಢ: ಪಂಜಾಬ್‌ನ ಮೊಗಾದಲ್ಲಿ ನಾಲ್ವರು ಶಸ್ತ್ರಸಜ್ಜಿತ ದಾಳಿಕೋರರು ಸ್ಥಳೀಯ ಮೆಡಿಕಲ್ ಶಾಪ್‌ಗೆ ನುಗ್ಗಿ ದರೋಡೆ ಮಾಡಿದ್ದಾರೆ. ಮಾಲೀಕನನ್ನು ಥಳಿಸಿರುವ ಅವರು ದುಡ್ಡು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ