ಚಾಮರಾಜನಗರ: ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ! ವಿಡಿಯೋ ಇಲ್ಲಿದೆ ನೋಡಿ

Edited By:

Updated on: May 08, 2026 | 11:20 AM

ಚಾಮರಾಜನಗರದ ಸಂತೇಮರಳ್ಳಿಯಲ್ಲಿ ಸಲೂನ್ ಒಳಗೆ ಬಂದ ಮಂಗವೊಂದು ಕ್ಷೌರಿಕನ ಬಳಿ ಶಿಸ್ತಿನಿಂದ ತಲೆ ಬಾಚಿಸಿಕೊಂಡ ಅಪರೂಪದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಂಗ ಕೇಶ ವಿನ್ಯಾಸ ಮಾಡಿಸಿಕೊಳ್ಳುತ್ತಿರುವುದನ್ನು ನೋಡಿ ಜನ ಅಚ್ಚರಿಗೊಂಡಿದ್ದಾರೆ. ಸದ್ಯ ಈ ಅಪರೂಪದ ವಿಡಿಯೋ ವೈರಲ್ ಆಗುತ್ತಿದ್ದು, ಇಲ್ಲಿದೆ ನೋಡಿ.

ಚಾಮರಾಜನಗರ, ಮೇ 8: ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಗ್ರಾಮದಲ್ಲಿ ವಿಚಿತ್ರ ಹಾಗೂ ಅಚ್ಚರಿಯ ಘಟನೆಯೊಂದು ನಡೆದಿದೆ. ಇಲ್ಲಿನ ದೇವರಾಜ್ ಎಂಬುವವರ ಸಲೂನ್‌ಗೆ ಮಂಗವೊಂದು ಬಂದು, ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡು ಎಲ್ಲರ ಗಮನ ಸೆಳೆದಿದೆ. ದಿನನಿತ್ಯ ಸಲೂನ್ ಬಳಿ ಬರುತ್ತಿದ್ದ ಈ ಮಂಗ, ಒಳಗೆ ಬಂದು ಕನ್ನಡಿಯಲ್ಲಿ ತನ್ನನ್ನು ತಾನು ನೋಡಿಕೊಳ್ಳುತ್ತಿತ್ತು. ಎಷ್ಟೇ ಗದರಿಸಿದರೂ ಕ್ಷೌರಿಕನ ಕೆಲಸ ಮುಗಿಯುವ ವರೆಗೂ ಅಲ್ಲಿಂದ ಕದಲುತ್ತಿರಲಿಲ್ಲ. ಮಂಗನ ಈ ನಡೆ ಗಮನಿಸಿದ ಸಲೂನ್ ಮಾಲೀಕ ದೇವರಾಜ್, ಪ್ರೀತಿಯಿಂದ ಅದರ ತಲೆ ಬಾಚಿದ್ದಾರೆ. ಬಳಿಕ ಕೇಶ ವಿನ್ಯಾಸ ಮಾಡುವಂತೆ ನಟಿಸಿ ತಲೆ ಬಾಚಿದಾಗ, ಮಂಗ ಯಾವುದೇ ಗಲಾಟೆ ಮಾಡದೆ ಗಂಭೀರವಾಗಿ ಕುಳಿತು ಕೇಶ ವಿನ್ಯಾಸ ಮಾಡಿಸಿಕೊಂಡಿದೆ. ಪ್ರಾಣಿ ಮತ್ತು ಮನುಷ್ಯನ ನಡುವಿನ ಈ ಅಪರೂಪದ ಸ್ನೇಹದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More