ಗ್ರಾ.ಪಂ. ಕಚೇರಿಯಲ್ಲಿ ಮುಸ್ಲಿಂ ಮೌಲ್ವಿ ಪ್ರಾರ್ಥನೆ ವಿಡಿಯೋ ವೈರಲ್: ಹಿಂದೂ ಸಂಘಟನೆಗಳಿಂದ ಅಕ್ರೋಶ
ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್‌ನ ಉಪಾಧ್ಯಕ್ಷರ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮೌಲ್ವಿಯೊಬ್ಬರು ಪ್ರಾರ್ಥನೆ ಸಲ್ಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಮೈತ್ರಿಯಿಂದ ಗ್ರಾಮ ಪಂಚಾಯತ್ ಅಧಿಕಾರಕ್ಕೆ ಬಂದಿರುವುದು ಇದಕ್ಕೆ ಕಾರಣ ಎಂದು ಹೇಳಲಾಗಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆಗಿದೆ.
ಉಡುಪಿ, ಜನವರಿ 03: ಕುಂದಾಪುರ (Kundapur) ತಾಲೂಕಿನ ಗಂಗೊಳ್ಳಿ ಗ್ರಾಮ ಪಂಚಾಯತ್ (Gram Panchayat) ಕಚೇರಿಯಲ್ಲಿ ಮುಸ್ಲಿಂ ಮೌಲ್ವಿಯೊಬ್ಬರು (Moulvi) ಪ್ರಾರ್ಥನೆ ಸಲ್ಲಿಸಿರುವ ವಿಡಿಯೋ ಸಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಹಿಂದೂ ಸಂಘಟನೆಗಳು ಅಕ್ರೋಶ ವ್ಯಕ್ತಪಡಿಸಿವೆ.
ಗಂಗೊಳ್ಳಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಮತ್ತು ಎಸ್‌ಡಿಪಿಐ ಮೈತ್ರಿ ಪಕ್ಷದ ತೆಕ್ಕೆಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಅಧಿಕಾರ ಹಂಚಿಕೆಯಾಗಿದೆ. ಕಾಂಗ್ರೆಸ್ನ ಜಯಂತಿ ಖಾರ್ವಿ ಎಂಬುವರು ಅಧ್ಯಕ್ಷರಾಗಿದದದರೇ, ಎಸ್‌ಡಿಪಿಐ ಬೆಂಬಲಿತ ಸದಸ್ಯ ತಬ್ರೇಜ್ ಉಪಾಧ್ಯಕ್ಷರಾಗಿದ್ದಾರೆ. ತಬ್ರೇಜ್ ಉಪಾಧ್ಯಕ್ಷ ಅಧಿಕಾರ ಸ್ವೀಕಾರ ವೇಳೆ ಎಸ್‌ಡಿಪಿಐ ಮುಖಂಡರು ಮೌಲ್ವಿಯನ್ನು ಕರೆಸಿ ಪ್ರಾರ್ಥನೆ ಮಾಡಿಸಿದ್ದಾರೆ.
ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪಾರ್ಥನೆ ಸಲ್ಲಿಸಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮೌಲ್ವಿ ಪಾರ್ಥನೆ ಸಲ್ಲಿಸಿದ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ಎಚ್ಚರ ಹಿಂದೂ ಎಚ್ಚರ ಎಂದಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Jan 03, 2025 08:08 AM
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

